ಹೊಸ ವರ್ಷಕ್ಕೆ ಬಡ್ತಿ, ಹೊಸ ವರ್ಷದ ಮೊದಲ ದಿನ ಅಧಿಕಾರ ಸ್ವೀಕಾರ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನೂತನ ಜಿಲ್ಲಾಧಿಕಾರಿ ಜಿ.ಎನ್.ಪ್ರಭುಗೆ ವರ್ಗಾಯಿತ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರ ಹಸ್ತಾಂತರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನೂತನ ಜಿಲ್ಲಾಧಿಕಾರಿ ಜಿ.ಎನ್.ಪ್ರಭುಗೆ ವರ್ಗಾಯಿತ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರ ಹಸ್ತಾಂತರಿಸಿದರು.
Published on
ಚಿಕ್ಕಬಳ್ಳಾಪುರ: ಹೊಸ ವರ್ಷದ ಮೊದಲ ದಿನ ಜಿಲ್ಲಾಧಿಕಾರಿಯಾಗಿ ಜಿ. ಪ್ರಭು ಅಧಿಕಾರ ಸ್ವೀಕರಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನೂತನ ಜಿಲ್ಲಾಧಿಕಾರಿಗೆ ನಿಕಟ ಪೂರ್ವ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅಧಿಕಾರ ಹಸ್ತಾಂತರಿಸಿದರು. ಪರಸ್ಪರ ಹೂಗುಚ್ಚ ಪಡೆದುಕೊಂಡು ಶುಭ ಕೋರಿದರು. ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ ಎನ್.ಭಾಸ್ಕರ್‌, ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ನಿರ್ಗಮಿತ ರವೀಂದ್ರಗೆ ಬೀಳ್ಕೊಡುಗೆ ನೀಡಿದರೆ, ಹೊಸದಾಗಿ ನೇಮಕಗೊಂಡ ಇಬ್ಬ ಜಿಲ್ಲಾಧಿಕಾರಿ ಜಿ.ಪ್ರಭುರನ್ನು ಸ್ವಾಗತಿಸಿದರು.
ಸರ್ಕಾರಿ ಯೋಜನೆಗಳ ಗುರಿ ಸಾಧನೆ, ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಸವಲತ್ತುಗಳನ್ನು ಒದಗಿಸುವುದರ ಜತೆಗೆ ಜಿಲ್ಲೆಯ ಸರ್ವಾಂಗೀಣ ಪ್ರಗತಿಗಾಗಿ ಎಲ್ಲರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ನೂತನ ಡಿಸಿ ತಿಳಿಸಿದರು.
ಕಳೆದ 2023 ರ ಜುಲೈನಲ್ಲಿ ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರಿ ಸ್ವೀಕರಿಸಿದ್ದ ರವೀಂದ್ರ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರಾಗಿ ನೇಮಕವಾಗಿದ್ದಾರೆ. ಈ ಹಿಂದೆ ತುಮಕೂರು ಜಿ.ಪಂ.ಮುಖ್ಯ ಕಾರ್ಯನಿರ್ವಾಣಾಧಿಕಾರಿಯಾಗಿದ್ದ ಪ್ರಭುರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರವೇ ಆದೇಶ ಹೊರಡಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net