ಪ್ರೇಮಿಗಳ ದಿನಾಚರಣೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮ
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮ
Published on
ಚಿಕ್ಕಬಳ್ಳಾಪುರ: ಅಂತಾರಾಷ್ಟ್ರೀಯ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಫೆ.೧೪ ರಂದು ಬೆಳಿಗ್ಗೆ ೬ ರಿಂದ ಸಂಜೆ ೬ ರವರೆಗೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತವು ಆದೇಶಿಸಿದೆ.
ಫೆ.೧೪ ರಂದು ಪ್ರೇಮಿಗಳ ದಿನಾಚರಣೆ. ಇದರ ಅಂಗವಾಗಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು ಸೇರಿದಂತೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುವ ಸಾಧ್ಯತೆ ಇದೆ. ಇದೇ ವೇಳೆ ಮೋಜು ಮಸ್ತಿ ಹೆಸರಿನಲ್ಲಿ ಅವಘಡಗಳು, ಅಹಿತಕರ ಘಟನೆಗಳು ಸಂಭವಿಸುವ ಹಾಗೂ ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಪ್ಪಿಸುವ ಉದ್ದೇಶದೊಂದಿಗೆ ನಿರ್ಬಂಧದ ಹೇರಲಾಗಿದೆ. ಇದಕ್ಕೆ ನಂದಿ ಗಿರಿಧಾನಕ್ಕೆ ಫೆ.14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶವನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.
ಇನ್ನು ಪ್ರತಿ ವರ್ಷ ಹೊಸ ವರ್ಷಾಚರಣೆಯ ಸಂದರ್ಭದಲ್ಲೂ ಡಿ.೩೧ ರಿಂದ ಮಧ್ಯಾಹ್ನದಿಂದ ಜ.೨ ರ ಬೆಳಿಗ್ಗೆ ೬ ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಪ್ರೇಮಿಗಳ ದಿನಾಚರಣೆಗೂ ಸಹ ನಿಯಮವನ್ನು ಜಾರಿಗೆ ತರಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net