ಹೀರೇನಾಗವಲ್ಲಿ ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿ

ಕಲ್ಲು ಕ್ವಾರಿಯಲ್ಲಿ ಮೃತಪಟ್ಟ ಕಾರ್ಮಿಕ
ಕಲ್ಲು ಕ್ವಾರಿಯಲ್ಲಿ ಮೃತಪಟ್ಟ ಕಾರ್ಮಿಕ
Published on
ಚಿಕ್ಕಬಳ್ಳಾಪುರ: ಇಲ್ಲಿನ ಪೆರೇಸಂದ್ರ ಸಮೀಪದ ಹಿರೇನಾಗವಳ್ಳಿ ಬೆಟ್ಟದಲ್ಲಿರುವ ಎಕೋ ಮರಳು ಕಲ್ಲು ಕ್ವಾರಿಯಲ್ಲಿ ಕೊರೆಯುವ ಕಾರ್ಯಾಚರಣೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿ ಆಂಧ್ರಪ್ರದೇಶದ ಧರ್ಮಾವರಂ ಮೂಲದ ನಾಗೇಂದ್ರ (35). ಸಂಜೆ ಕಲ್ಲು ಕ್ವಾರಿಯಲ್ಲಿ ಯಂತ್ರೋಪಕರಣದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ೨೦೨೧ ನೇ ಸಾಲಿನ ಫೆಬ್ರವರಿ 23 ರಂದು ಇದೇ ಹಿರೇನಾಗವಳ್ಳಿ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಜಿಲೆಟಿನ್‌ ಕಡ್ಡಿ ಸ್ಫೋಟದಲ್ಲಿ ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ದೇಹಗಳು ಗುರುತು ಸಿಗದಷ್ಟು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ರಾಜ್ಯದಲ್ಲಿ ಈ ಅವಘಡ ಸಂಚಲನ ಮೂಡಿಸಿ, ಕಾರ್ಮಿಕರ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆದಿದ್ದವು.
ಈಗ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಾಪಟ್ಟಣದಲ್ಲಿ ಕಲ್ಲು ಬಂಡೆ ಬಿದ್ದು ೭ ಕಾರ್ಮಿಕರು ಮೃತಪಟ್ಟು ೯ ಮಂದಿ ಗಾಯಗೊಂಡಿರುವ ದುರ್ಘಟನೆ ಸಂಭವಿಸಿದ ಬೆನ್ನಲ್ಲಿಯೇ ಪೆರೇಸಂದ್ರ ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿಯಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net