

ಚಿಕ್ಕಬಳ್ಳಾಪುರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ಪೇದೆ ಹುದ್ದೆಗಳ ನೇರ ನೇಮಕಾತಿಗೆಸಂಬಂಧಿಸಿದ ಲಿಖಿತ ಪರೀಕ್ಷೆಯು ಆ.2 ರಂದು ನಡೆಯುತ್ತಿದ್ದುಇದಕ್ಕಾಗಿ ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳ ಸ್ಥಾಪಿಸಲಾಗಿದೆ.ಪರೀಕ್ಷೆಯನ್ನು ಪಾರದರ್ಶಕ, ಸುಸೂತ್ರ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.
ಜಿಲ್ಲೆಯಲ್ಲಿ ಪರೀಕ್ಷೆಗೆ 4526 ಅಭ್ಯರ್ಥಿಗಳುಹೆಸರು ನೋಂದಾಯಿಸಿಕೊಂಡಿದ್ದು 9 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ಈಗಾಗಲೇ ಜಿಲ್ಲಾಧಿಕಾರಿ ಜಿ.ಪ್ರಭು ನೇತೃತ್ವದಲ್ಲಿ ಪರೀಕ್ಷೆ ನಿರ್ವಹಣೆ ಪೂರ್ಭಾವಿ ಸಿದ್ಧತಾ ಸಭೆಯನ್ನುಕೈಗೊಂಡು, ಸಂಬಂಧಪಟ್ಟ ಇಲಾಖೆಗಳಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.
ಧಾರ್ಮಿಕಕಾರಣಗಳಿಂದ ವಿಶೇಷ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳುಪರೀಕ್ಷೆ ಆರಂಭಕ್ಕೆ ಎರಡು ಗಂಟೆಗಳ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಎಲ್ಲ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ, ಬಳಿಕ ಪರೀಕ್ಷೆಬರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಅಭ್ಯರ್ಥಿಗಳು ಜನಿವಾರ ಹಾಗೂ ಶಿವದಾರ ಧರಿಸಿರಲುಅನುಮತಿ ಇರುತ್ತದೆ. ಆದರೆ, ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಕಾಗದ, ವಿದ್ಯುನ್ಮಾನ ಉಪಕರಣಗಳು, ಕೈಗಡಿಯಾರ, ಕೈಚೀಲ, ಬೆಲ್ಟ್, ಕ್ಯಾಪ್, ಗಾಗಲ್ಸ್, ಆಹಾರ ಪದಾರ್ಥಗಳು, ನೀರಿನ ಬಾಟಲಿ ಸೇರಿದಂತೆ ಯಾವುದೇ ವಸ್ತುಗಳನ್ನು ತರಲು ಅವಕಾಶ ಇರುವುದಿಲ್ಲ. ಪ್ರತಿಯೊಬ್ಬವಿದ್ಯಾರ್ಥಿಗಳು ಪರೀಕ್ಷೆಗೆ ನಿಗದಿಪಡಿಸಿರುವ ವಸ್ತ್ರಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬಾರದು. ಕಿವಿ, ತಲೆ ಹಾಗೂ ಮುಖ ಮುಚ್ಚುವ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶವಿರುವುದಿಲ್ಲ. ಮೂಗುತಿ ಹಾಗೂ ಮಂಗಳಸೂತ್ರವನ್ನು ಹೊರತುಪಡಿಸಿ ಇತರೆ ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಶೂ ಧರಿಸಿಕೊಂಡು ಬರುವುದಕ್ಕೂ ಅವಕಾಶವಿರುವುದಿಲ್ಲ ಎಂದುಡಿಸಿ ತಿಳಿಸಿದ್ದಾರೆ.