ಜ.12ರಿಂದ ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವ

ಸರಗೂರಿನ ತಹಸೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಪಾಲ್ಗೊಂಡಿದ್ದರು. ಮೋಹನ ಕುಮಾರಿ, ರಘು, ರಾಜಣ್ಣ, ಮಹದೇವಸ್ವಾಮಿ ಇದ್ದರು.
ಸರಗೂರಿನ ತಹಸೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಪಾಲ್ಗೊಂಡಿದ್ದರು. ಮೋಹನ ಕುಮಾರಿ, ರಘು, ರಾಜಣ್ಣ, ಮಹದೇವಸ್ವಾಮಿ ಇದ್ದರು.
Published on

ಸರಗೂರು: ತಾಲೂಕಿನ ಕುಂದೂರು ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವವನ್ನು ಜ.12 ರಿಂದ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ಮುಜರಾಯಿ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ದೇವಸ್ಥಾನದ ಇಒ ರಘು ಹೇಳಿದರು.

ಪಟ್ಟಣದಲ್ಲಿರುವ ತಹಸೀಲ್ದಾರ್ ಮೋಹನಕುಮಾರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಯೋಜಿಸಿದ್ದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನುಳಿದಂತೆ ನಿರಂತರ ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸಿದ್ದು, ಸ್ಪಂದಿಸದ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ತಹಸೀಲ್ದಾರ್ ಮೋಹನ್‌ಕುಮಾರಿ, ಜಾತ್ರೆ ಸುಸೂತ್ರವಾಗಿ ನಡೆಯಲು ತಾಲೂಕು ಆಡಳಿತ ಸಕಲ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಆಂಬುಲೆನ್ಸ್ ಸೌಲಭ್ಯ ಕಲ್ಪಿಸಬೇಕು. ಇದಲ್ಲದೆ ಜಾತ್ರಾ ಮಹೋತ್ಸವ ನಡೆಯುವ ಸ್ಥಳದಲ್ಲಿ ಜಂಗಲ್ ಕಟ್ಟಿಂಗ್, ನೆಲ ಸಮತಟ್ಟು ಆಗಬೇಕು ಎಂದು ಸಲಹೆ ನೀಡಿದರು.

ದೇವಸ್ಥಾನದ ಪಾರುಪತ್ತೇದಾರ ಮಹಾದೇವಸ್ವಾಮಿ ಮಾತನಾಡಿ, ಜಾತ್ರೆ ಮಾಳದಲ್ಲಿ ಅಂಗಡಿಗಳನ್ನು ತೆರೆಯಲು ಅನುಕೂಲ ಮಾಡಿಕೊಡಬೇಕು. ದೇವಸ್ಥಾನದ ಪಕ್ಕದಲ್ಲಿಯೇ ಕುಡಿಯುವ ನೀರಿನ ಬೋರ್‌ವೆಲ್ ಕೆಟ್ಟಿದ್ದು, ರಿಪೇರಿಯಾಗಬೇಕು ಎಂದರು.

ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ವೈ.ಡಿ.ರಾಜಣ್ಣ, ಉಪ ತಹಸೀಲ್ದಾರ್ ರವೀಂದ್ರ, ಒಬಿಸಿ ಇಲಾಖೆಯ ಮಹದೇವನಾಯಕ, ಸಮಾಜ ಕಲ್ಯಾಣಾಧಿಕಾರಿ ಆರೀಫ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಂಜಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net