ಜ.26ರಿಂದ 28ರವರೆಗೆ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ

web 1
Published on

ಚಿಕ್ಕಮಗಳೂರು: ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.26 ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

ತೋಟಗಾರಿಕೆ ಇಲಾಖೆ, ಜಿಪಂ, ಮೈಸೂರು ಉದ್ಯಾನ ಕಲಾ ಸಂಘದಿಂದ ಆಯೋಜಿಸಿರುವ ಕಾರ್ಯಕ್ರಮವನ್ನು 26ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್.ಧಮೇಗೌಡ ಇಲಾಖಾ ಮಳಿಗೆಗಳನ್ನು ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಪುಷ್ಪ ಕಲಾಕೃತಿ ಉದ್ಘಾಟಿಸಲಿದ್ದಾರೆ.

ಸಂಸದರಾದ ಶೋಭಾ ಕರಂದ್ಲಾಜೆ, ಪ್ರಜ್ವಲ್ ರೇವಣ್ಣ, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಡಿ.ಎಸ್.ಸುರೇಶ್, ಟಿ.ಡಿ.ರಾಜೇಗೌಡ, ಬೆಳ್ಳಿಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಂ.ಕೆ.ಪ್ರಾಣೇಶ್, ಎಸ್.ಎಲ್.ಬೋಜೇಗೌಡ, ತಾಪಂ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ಜಯಣ್ಣ ಇತರರು ಭಾಗವಹಿಸಲಿದ್ದಾರೆ.

ಜ.28 ರಂದು ಸಂಜೆ 6ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಸಿಇಒ ಎಸ್.ಅಶ್ವಥಿ, ಎಸ್​ಪಿ ಹರೀಶ್ ಪಾಂಡೆ, ತೋಟಗಾರಿಕೆ ಅಪರ ನಿರ್ದೇಶಕ ಎಚ್.ಎಸ್.ಶಿವಕುಮಾರ್, ಬೆಂಗಳೂರು ಲಾಲ್​ಬಾಗ್ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಎಂ.ಪರಶಿವಮೂರ್ತಿ, ತಾಳೆಬಾಳೆ ಯೋಜನೆ ತೋಟಗಾರಿಕೆ ಅಪರ ನಿರ್ದೇಶಕ ಡಾ. ಪಿ.ಎಂ.ಸೊಬರದ್, ಹಣ್ಣುಗಳು ಮತ್ತು ಪುಷ್ಪಾಭಿವೃದ್ಧಿ ತೋಟಗಾರಿಕೆ ಅಪರ ನಿರ್ದೇಶಕ ಕೆ.ಬಿ.ದುಂಡಿ, ಹನಿ ನೀರಾವರಿ ತೋಟಗಾರಿಕೆ ಜಂಟಿ ನಿರ್ದೇಶಕ ಕದಿರೇಗೌಡ, ಮೈಸೂರು ತೋಟಗಾರಿಕೆ ಇಲಾಖೆ ವಿಭಾಗೀಯ ಜಂಟಿ ನಿರ್ದೇಶಕ ಎಚ್.ಎಂ.ನಾಗರಾಜ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಂ.ಸೋಮಸುಂದರ್ ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net