

ಶೃಂಗೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 5 ಕೋಟಿ ರೂಪಾಯಿ ಅನುದಾನದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಿಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಕಟ್ಟಡದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಬಹಳ ವರ್ಷಗಳ ಬೇಡಿಕೆಯಾದ ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ. ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ನಿರಂತರ ಪ್ರೋತ್ಸಾಹ ಹಾಗೂ ಅನುದಾನ ನೀಡುತ್ತಿದೆ. ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್ ಕೊಡ್ತಲ್, ಕಾಂಗ್ರೆಸ್ ಮುಖಂಡರಾದ ಮಾರನಕೊಡಿಗೆ ನಟರಾಜ್, ಶಿವಮೂರ್ತಿ,ದಿನೇಶ್ ಶೆಟ್ಟಿ, ರಾಜಕುಮಾರ್, ಪುಟ್ಟಪ್ಪ ಹೆಗಡೆ, ತ್ರಿಮೂರ್ತಿ ಇತರರಿದ್ದರು.