ವಾರಂಟಿ ಇಲ್ಲದ ಗ್ಯಾರಂಟಿ ಸರ್ಕಾರಕ್ಕೆ ಜನರಿಂದ ತಕ್ಕ ಪಾಠ

ರಾಜ್ಯ ಸರ್ಕಾರದ ವೈಲ್ಯ, ಶಾಸಕರ ದುರಾಡಳಿತ ಖಂಡಿಸಿ ತರಿಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವೈಲ್ಯ, ಶಾಸಕರ ದುರಾಡಳಿತ ಖಂಡಿಸಿ ತರಿಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on
ತರೀಕೆರೆ: ಗುಟ್ಖಾ ನಿಷೇಧಿಸಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಎನ್‌ಆರ್‌ಎಂಎಲ್ ಯೋಜನೆ ಅವ್ಯವಹಾರ, ಶಾಸಕರ ಕುಟುಂಬ ರಾಜಕಾರಣ, ಕಮಿಷನ್ ದಂಧೆ, ಕಳಪೆ ರಸ್ತೆ ಕಾಮಗಾರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿ ಎಸಿ ಎನ್.ವಿ.ನಟೇಶ್‌ಗೆ ಮನವಿ ಸಲ್ಲಿಸಿದರು.
ಸಂಸದ ಕೋಟ ಶ್ರೀ ನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಈ ಹೋರಾಟ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನದ್ದಲ್ಲ. ಟಿಪ್ಪು ಹಾಗೂ ರಾಮಭಕ್ತರ ಮಧ್ಯೆ ನಡೆಯುತ್ತಿರುವ ಹೋರಾಟ. ವ್ಯಾರಂಟಿ ಇಲ್ಲದ ಗ್ಯಾರಂಟಿ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಪಟ್ಟಣದಲ್ಲಿ ಹಾದು ಹೋಗಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಕೇಂದ್ರ ಸರ್ಕಾರ 4.32 ಕೋಟಿ ರೂ ಮಂಜೂರು ಮಾಡಿದೆ. ಲೋಕೋಪಯೋಗಿ ಇಲಾಖೆ ಮೂಲಕ ನಿರ್ವಹಿಸಿರುವ ಕಾಮಗಾರಿ ಕಳಪೆಯಾಗಿದೆ. ಈ ಕುರಿತು ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಂತಿಪುರ ಉಪಕಣಿವೆಯಿಂದ 56 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸಲಾಗಿತ್ತಾದರೂ, ರಾಜ್ಯ ಕಾಂಗ್ರೆಸ್ ಉಳಿದ ಕಾಮಗಾರಿ ಪೂರ್ಣಗೊಳಿಸಲು ಬೇಕಾದ 30 ಕೋಟಿ ರೂ. ಬಿಡುಗಡೆ ಮಾಡದೆ ಕಾಮಗಾರಿ ಅರ್ಥಕ್ಕೆ ನಿಂತಿದೆ. ಹಳಿಯೂರು ಸಮೀಪದ ಮುಖ್ಯರಸ್ತೆ ಎರಡು ತಿಂಗಳಲ್ಲಿ ಹಾಳಾಗಿದೆ. ಇದರಲ್ಲಿ ಅನುದಾನ ಲೂಟಿಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಜಿಪಂ ಮಾಜಿ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ, ಮ್ಯಾಮ್ಕೋಸ್ ನಿರ್ದೇಶಕ ಟಿ.ಎಲ್.ರಮೇಶ್, ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೆ.ಆರ್.ಆನಂದಪ್ಪ, ಟಿ.ಎಲ್.ರಮೇಶ್, ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಪ್ರಧಾನ ಕಾರ್ಯದರ್ಶಿ ಬಿ.ಸಿ.ಬಸವರಾಜ್, ಅಜ್ಜಂಪುರ ಪಪಂ ಸದಸ್ಯ ಬಿ.ರಂಗಸ್ವಾಮಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net