ಬರ ಪರಿಸ್ಥಿತಿ ಅಧ್ಯಯನಕ್ಕೆ ಕಡೂರು ತಾಲೂಕಿನ ವಿವಿಧ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಕಡೂರಿಗೆ ತೆರಳುವ ಮಾರ್ಗದ 9 ಮೈಲಿ ಸರ್ಕಲ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಶಾಸಕರು, ಅಧಿಕಾರಿಗಳ ಕಾರು ಅಡ್ಡಗಟ್ಟಿ ಭದ್ರಾ ಮೇಲ್ಡಂಡೆ ಯೋಜನೆಯ ಜಮೀನು ಕಳೆದುಕೊಂಡ ರೈತರಿಗೆ ತ್ವರಿತವಾಗಿ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಘಟನೆ ನಡೆಯಿತು.