ಆರೋಪಿ ಶೇಷಗಿರಿಯ ಅತ್ತೆ ಮಗಳನ್ನು ಪೇಟೆಗದ್ದೆಯ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದು, ಪತಿ, ಪತ್ನಿಯರಲ್ಲಿ ಸಾಂಸಾರಿಕ ಜೀವನ ಸರಿ ಬಾರದ ಹಿನ್ನೆಲೆಯಲ್ಲಿ ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದರು. ನಂತರ ಆಕೆ ಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಆಕೆ ಮನೆಗೆ ಪೇಟೆಗದ್ದೆ ಅರುಣ್ ಬಂದು ಹೋಗುತ್ತಿದ್ದ. ಇವರಿಬ್ಬರಿಗೂ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ.