ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಕುಡಿಯುವ ನೀರಿನ ಬಾಟಲ್ ವಿತರಣೆ ಕಾರ್ಯಕ್ರಮದಲ್ಲಿ ಮಹಿಳೆಯರ ಸಬಲೀಕರಣ ಕುರಿತು ಉಪನ್ಯಾಸ ನೀಡಿ, ಕೇವಲ ಗೌರವ ಧನ ಪಡೆಯುವ ಆಶಾ ಕಾರ್ಯಕರ್ತೆಯರು ವಾರ್ಡ್‌ಗಳು, ಗ್ರಾಮಗಳಲ್ಲಿ ಸುತ್ತಾಡಿ ಗರ್ಭಿಣಿಯರು, ಬಾಣಂತಿಯರ ಆರೋಗ್ಯ ವಿಚಾರಿಸುತ್ತಾರೆ. ಈ ಒತ್ತಡದ ಕೆಲಸದ ನಡುವೆ ತಮ್ಮ ಆರೋಗ್ಯ ನೋಡಿಕೊಳ್ಳಲು ಸಮಯ ಸಿಗುವುದಿಲ್ಲ. ಆಶಾ ಕಾರ್ಯಕರ್ತೆಯರು ನಿಸ್ವಾರ್ಥದಿಂದ ಸೇವೆ ಮಾಡುತ್ತಾರೆ ಎಂದರು.