ವ್ಯವಸ್ಥಾಪನಾ ಸಮಿತಿ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತು ಮತ್ತು ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವ್ಯವಸ್ಥಾಪನಾ ಸಮಿತಿ ರಚಿಸಿದ್ದು, ಏಕ ಪಕ್ಷೀಯವಾಗಿ ರಚನೆಯಾಗಿದ್ದ ಸಮಿತಿ ಕುರಿತು ಸಾಕಷ್ಟು ಆಕ್ಷೇಪಗಳು ವ್ಯಕ್ತವಾಗಿದ್ದವು. ಸಮಿತಿ ಬದಲಾವಣೆ ಮಾಡಬೇಕು ಎನ್ನುವ ಆಗ್ರಹ ಕೇಳಿಬಂದಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಸಮಿತಿ ಬದಲಾವಣೆ ಆಗಬಹುದು ಎನ್ನುವ ನಿರೀಕ್ಷೆ ಇದ್ದರೂ ಸರ್ಕಾರ ಆ ಬಗ್ಗೆ ಗಮನಹರಿಸಿರಲಿಲ್ಲ.