ಶೃಂಗೇರಿಯಲ್ಲಿ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ

ಶೃಂಗೇರಿ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಮತ್ತು ಜಾನಪದ ಸಮ್ಮೇಳನಕ್ಕಾಗಿ ನಿರ್ಮಿಸಿರುವ ಜಗದ್ಗುರು ಶ್ರೀ ಭಾರತೀತೀರ್ಥ ಮಹಾ ಸ್ವಾಮೀಜಿ ಮಹಾದ್ವಾರ.
ಶೃಂಗೇರಿ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಮತ್ತು ಜಾನಪದ ಸಮ್ಮೇಳನಕ್ಕಾಗಿ ನಿರ್ಮಿಸಿರುವ ಜಗದ್ಗುರು ಶ್ರೀ ಭಾರತೀತೀರ್ಥ ಮಹಾ ಸ್ವಾಮೀಜಿ ಮಹಾದ್ವಾರ.
Published on: 

ಶೃಂಗೇರಿ: ಮೆಣಸೆ ಗ್ರಾಪಂ ವ್ಯಾಪ್ತಿಯ ಕೊಟ್ಟೋಡಿ ಶ್ರೀ ಈಶ್ವರ ದೇವಸ್ಥಾನದ ಆವರಣದಲ್ಲಿ 21ರಂದು ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಮತ್ತು ಜಾನಪದ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ವಿವಿಧ ಸಂಘಟನೆಗಳಲ್ಲಿ ಸೇವೆ ಮಾಡಿದ ನಾಗೇಶ್ ಕಾಮತ್ ಆಯ್ಕೆಯಾಗಿದ್ದಾರೆ.

ತಾಲೂಕು, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಅಶ್ರಯದಲ್ಲಿ ಒಂದ ದಿನ ಆಯೋಜಿಸಿರುವ ಕಸಬಾ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನವನ್ನು ಬೆಳಗ್ಗೆ 10.30ಕ್ಕೆ ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಸ್ಮರಣ ಸಂಚಿಕೆಯನ್ನು ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಸಮ್ಮೇಳನ ಅಧ್ಯಕ್ಷರ ಭಾಷಣ ಪ್ರತಿಯನ್ನು ಮಾಜಿ ಶಾಸಕ ಡಿ.ಎನ್.ಜೀವರಾಜ್ ಬಿಡುಗಡೆ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪಾರ್ಚಾನೆ ಮಾಡಲಿದ್ದಾರೆ.

ಜಾನಪದ ಕಲಾ ವಸ್ತು ಪ್ರದರ್ಶನವನ್ನು ಕಜಾಪ ಜಿಲ್ಲಾಧ್ಯಕ್ಷ ಬಿ.ಬಿ.ಸುರೇಶ್ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕನ್ನಡ ರಾಜೋತ್ಸವ ಪುರಸ್ಕೃತರಾದ ಚಟ್ನಳ್ಳಿ ಮಹೇಶ್ ಹಾಗೂ ಶೃಂಗೇರಿ ಕ್ಷೇತ್ರ ಕಷಿ ಒಕ್ಕೂಟದ ಅಧ್ಯಕ್ಷ ಗದ್ದೆಮನೆ ವಿಶ್ವನಾಥ್ ಭಾಗವಹಿಸಲಿದ್ದಾರೆ. ಶ್ರೀಮಠದ ಮುಂಭಾಗದಿದ ಪ್ರಾರಂಭವಾಗುವ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ್ ಶೆಟ್ಟಿ ಚಾಲನೆ ನೀಡಲಿದ್ದಾರ. ಪಪಂ ಮಾಜಿ ಅಧ್ಯಕ್ಷ ಹರೀಶ್.ವಿ.ಶೆಟ್ಟಿ ಹಾಗೂ ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ಪ್ರವೀಣ್ ಪೂಜಾರಿ ಭಾಗಿಯಾಗಲಿದ್ದಾರೆ.

ಸಮ್ಮೇಳನದಲ್ಲಿ ಸಾಹಿತ್ಯ, ಜಾನಪದ ಕವಿಗೋಷ್ಠಿ ನಡೆಯಲಿದ್ದು, ಸಂಜೆ 5 ಗಂಟೆಗೆ ಬಹಿರಂಗ ಅಧಿವೇಶನ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಕಾನುವಳ್ಳಿ ಕೃಷ್ಣಪ್ಪಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ನಾಗೇಶ್ ಕಾಮತ್ ಸಮ್ಮೇಳನಧ್ಯಕ್ಷರ ಭಾಷಣ ಮಾಡಲಿದ್ದಾರೆ. ಶ್ರೀಮಠದ ಜಗದ್ಗುರುಗಳ ಆಪ್ತ ಸಹಾಯಕ ಶಂ.ನ.ಕಷ್ಣಮೂರ್ತಿ ಭಟ್ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.30ಕ್ಕೆ ಗಾಯಕ ಕಣದಮನೆ ಜಗದೀಶ್ ಮತ್ತು ತಂಡದವರಿಂದ ಜಾನಪದ ಸಂಗೀತ ಲಹರಿ ಹಾಗೂ ತೀರ್ಥಹಳ್ಳಿಯ ಗಾಯಕ ಇಮ್ತಿಯಾಜ್ ಸುಲ್ತಾನ್ ಹಾಗೂ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಹಾಲಂದೂರು ರಸ್ತೆ ಸಮೀಪ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾ ಸ್ವಾಮೀಜಿ ಮಹಾದ್ವಾರ, ಮುಡುಬನ ಶ್ರೀ ಗಣಪತಿ ದೇವಸ್ಥಾನದ ಸಮೀಪ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರ, ಶ್ರೀ ವರದೇಶ್ವರ ದೇವಾಲಯದ ಹತ್ತಿರ ಸಾಹಿತ್ಯ ಪದ್ಮಭೂಷಣ ಸೀತಾರಾಮ್ ಕಿರಕೋಡು ಮಹಾದ್ವಾರದ ನಿರ್ಮಾಣ ಕಾರ್ಯ ನಡೆಯುತ್ತಿದೆ.