ಪ್ರತಿ ಗ್ರಾಮದಲ್ಲೂ ಸಭೆ ನಡೆಸಲು ಅವಕಾಶ ಕೊಡಿ

ಎನ್.ಆರ್.ಪುರ ತಾಪಂ ಇಒ ಎಚ್.ಡಿ.ನವೀನ್‌ಕುಮಾರ್‌ಗೆ ಮಲೆನಾಡು ರೈತ ಹಿತ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಎಂ.ಎನ್.ನಾಗೇಶ್, ದೇವಂತ್‌ರಾಜ್ ಗೌಡ, ಮಂಜುನಾಥ್ ಇದ್ದರು.
ಎನ್.ಆರ್.ಪುರ ತಾಪಂ ಇಒ ಎಚ್.ಡಿ.ನವೀನ್‌ಕುಮಾರ್‌ಗೆ ಮಲೆನಾಡು ರೈತ ಹಿತ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಎಂ.ಎನ್.ನಾಗೇಶ್, ದೇವಂತ್‌ರಾಜ್ ಗೌಡ, ಮಂಜುನಾಥ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಲೆನಾಡು ರೈತ
  • ಹಿತರಕ್ಷಣಾ ವೇದಿಕೆ

ಎನ್.ಆರ್.ಪುರ: ಪಶ್ಚಿಮಘಟ್ಟ ಸೂಕ್ಷ್ಮ ವಲಯ ಅಧಿಸೂಚನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ರೈತರ ಬದುಕು ಮೂರಾಬಟ್ಟೆಯಾಗಲಿದೆ. ಆದ್ದರಿಂದ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಾಮಗಳಲ್ಲೂ ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಲು ಅವಕಾಶ ನೀಡಿ ಎಂದು ಮಲೆನಾಡು ರೈತ ಹಿತರಕ್ಷಣಾ ವೇದಿಕೆಯಿಂದ ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಎಂ.ಎನ್.ನಾಗೇಶ್, ಪಶ್ಚಿಮಘಟ್ಟ ಸೂಕ್ಷ್ಮವಲಯಕ್ಕೆ ತಾಲೂಕಿನ ಬಹುತೇಕ ಗ್ರಾಮಗಳು ಒಳಪಡುತ್ತವೆ. ಕರಡು ಅಧಿಸೂಚನೆಯಿಂದ ಮಲೆನಾಡಿಗರು ಆತಂಕದಲ್ಲಿದ್ದಾರೆ. ಆದ್ದರಿಂದ ತಾಲೂಕಿನ ಎಲ್ಲ ಗ್ರಾಪಂಗಳ ಪ್ರತಿ ಗ್ರಾಮದಲ್ಲೂ ಚರ್ಚಿಸಿ ಆಕ್ಷೇಪ ವ್ಯಕ್ತಪಡಿಸಲು ವಿಶೇಷ ಗ್ರಾಮಸಭೆಗಳನ್ನು ನಡೆಸಲು ಪಿಡಿಒಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಸಮಿತಿಯ ದೇವಂತ್‌ರಾಜ್‌ಗೌಡ, ಮಂಜುನಾಥ್ ಇದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net