ಮೂಡಿಗೆರೆ ಎಸಿಎಫ್ ಆಕರ್ಷ, ಆರ್‌ಎಫ್‌ಓ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ ರವಿರಾಜ್, ಜಿ.ಹೊಸಳ್ಳಿ ಗ್ರಾಮದ ಪ್ರಮುಖ ದೀಪಕ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗುರುವಮ್ಮ ಅವರ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಕಾಡಾನೆ ದಾಳಿಯಿಂದ ಗಾಯಗೊಂಡವರಿಗೆ 60 ಸಾವಿರ ರೂ.ವರೆಗೆ ಪರಿಹಾರ ನೀಡಲು ಇಲಾಖೆಯಲ್ಲಿ ಅವಕಾಶವಿದೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಗುರುವಮ್ಮ ಅವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.