ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ

ಕೊಟ್ಟಿಗೆಹಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ತಿನ ಕಾರ್ಯಕ್ರಮವನ್ನು ತಹಸೀಲ್ದಾರ್ ಎಸ್.ಅಶ್ವಿನಿ ಉದ್ಘಾಟಿಸಿದರು. ಶರತ್, ರಘು, ಸ್ವರೂಪ ಪ್ರಶಾಂತ್ ಇದ್ದರು
ಕೊಟ್ಟಿಗೆಹಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ತಿನ ಕಾರ್ಯಕ್ರಮವನ್ನು ತಹಸೀಲ್ದಾರ್ ಎಸ್.ಅಶ್ವಿನಿ ಉದ್ಘಾಟಿಸಿದರು. ಶರತ್, ರಘು, ಸ್ವರೂಪ ಪ್ರಶಾಂತ್ ಇದ್ದರು
Published on
ಮೂಡಿಗೆರೆ: ನಾಯಕತ್ವದ ಗುಣ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಶಾಲಾ ಸಂಸತ್ತು ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ತಹಸೀಲ್ದಾರ್ ಎಸ್.ಅಶ್ವಿನಿ ಹೇಳಿದರು.
ಕೊಟ್ಟಿಗೆಹಾರ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಶಾಲೆ ಸಂಸತ್ತಿನ ಕಾರ್ಯಕ್ರಮ ಹಾಗೂ ಶಾಲಾ ಮಂತ್ರಿಮಂಡಲದ ನೂತನ ವಿದ್ಯಾರ್ಥಿ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ನಾಯಕತ್ವವೆಂದರೆ ಅಧಿಕಾರವಲ್ಲ. ಅದೊಂದು ಸಾಮಾಜಿಕ ಸೇವೆ ಮಾಡುವ ಜವಾಬ್ದಾರಿ, ಸಹಪಾಠಿಗಳ ಸಮಸ್ಯೆ ಅರ್ಥ ಮಾಡಿಕೊಂಡು ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಶಾಲಾ ಸಂಸತ್ತಿನ ಮೂಲಕ ನಾಯಕತ್ವದ ಕೌಶಲಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಸಲಹೆ ನೀಡಿದರು.
ಮಂತ್ರಿಮಂಡಲದಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳು ಶಾಲೆ ಅಭಿವೃದ್ಧಿ, ಶಿಸ್ತು, ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿ ದೆಸೆಯಲ್ಲಿ ಭವಿಷ್ಯದ ಬಗ್ಗೆ ಗುರಿ ಇಟ್ಟುಕೊಳ್ಳಬೇಕು. ಶೈಕ್ಷಣಿಕ ಪಠ್ಯಪುಸ್ತಕದ ಜತೆಗೆ ಗ್ರಂಥಾಲಯದಲ್ಲಿ ದೊರಕುವ ಪುಸ್ತಕಗಳನ್ನು ಪ್ರತಿದಿನ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಶರತ್, ತರುವೆ ಗ್ರಾಪಂ ಅಧ್ಯಕ್ಷ ರಘು, ಉಪಾಧ್ಯಕ್ಷೆ ಸ್ವರೂಪ ಪ್ರಶಾಂತ್, ಸದಸ್ಯೆ ಸ್ಮಿತಾ ರವಿ, ಮುಖ್ಯ ಶಿಕ್ಷಕ ಟಿ.ಎಸ್.ಭಾಗ್ಯ, ಸಂಜಯ್, ಶಿವರಾಮೇಗೌಡ, ಸತೀಶ್, ಶೈನಿ, ಮೇಘನಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net