ಬೀದಿ ನಾಟಕದ ಮೂಲಕ ಜಾಗೃತಿ

 ತ್ರಿಪುರ ಗ್ರಾಮದಲ್ಲಿ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಬೀದಿ ನಾಟಕ ಕಾರ್ಯಕ್ರಮವನ್ನು ಸದಾನಂದ ಬಂಗೇರ ಉದ್ಘಾಟಿಸಿದರು. ಬೇಬಿ, ಭಾರತಿ, ಉಷಾ, ಗೋಪಿ ಇತರರಿದ್ದರು.
ತ್ರಿಪುರ ಗ್ರಾಮದಲ್ಲಿ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಬೀದಿ ನಾಟಕ ಕಾರ್ಯಕ್ರಮವನ್ನು ಸದಾನಂದ ಬಂಗೇರ ಉದ್ಘಾಟಿಸಿದರು. ಬೇಬಿ, ಭಾರತಿ, ಉಷಾ, ಗೋಪಿ ಇತರರಿದ್ದರು.
Published on
 ಮೂಡಿಗೆರೆ: ಬಣಕಲ್ ವಲಯದ ತ್ರಿಪುರ ಕಾರ್ಯಕ್ಷೇತ್ರದ ಪದ್ಮಾವತಿ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸರ್ಕಾರದ ವಿವಿಧ ಯೋಜನೆಗಳ ಅರಿವು ಮೂಡಿಸುವ ಬೀದಿ ನಾಟಕ ಕಾರ್ಯಕ್ರಮ ಮಂಗಳವಾರ ನಡೆಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಮಾತನಾಡಿ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಬೀದಿ ನಾಟಕದ ಉದ್ದೇಶ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಸರಳವಾಗಿ ಅರಿವು ಮೂಡಿಸುವುದಾಗಿದೆ. ಈ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಮಹಿಳೆಯರು ಸಬಲರಾಗಬೇಕು, ಸಮಾಜದಲ್ಲಿ ಅರಿವು ಮೂಡಬೇಕು ಎಂಬುದೇ ನಮ್ಮ ಗುರಿ ಎಂದರು.
ತಾಲೂಕು ಯೋಜನಾಧಿಕಾರಿ ಬೇಬಿ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ತಳಮಟ್ಟದವರೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಬೀದಿ ನಾಟಕದಂತಹ ಪ್ರಯೋಗಗಳಿಂದ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಚಿಕ್ಕಮಗಳೂರಿನ ರೇಣುಕಾ ಮಾತಾ ಕಲಾ ತಂಡದ ಕಲಾವಿದರು ಬಾಲ್ಯ ವಿವಾಹ, ಹಸಿ ಕಸ-ಒಣ ಕಸ ವಿಂಗಡಣೆ, ಹೆಲ್ಮೆಟ್ ಬಳಕೆಯ ಮಹತ್ವ, ನೀರಿನ ಸಮರ್ಪಕ ಬಳಕೆ, ದುಶ್ಚಟಗಳ ನಿರ್ಮೂಲನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಿದರು.
ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ, ಸೇವಾ ಪ್ರತಿನಿಧಿ ಉಷಾ, ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ಗೋಪಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net