ಗ್ಯಾರಂಟಿ ಯೋಜನೆಗಳು ದುರುಪಯೋಗವಾಗದಂತೆ ಎಚ್ಚರ ವಹಿಸಿ

ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್‌ನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಸ್.ಎನ್.ಮಂಜುನಾಥ್, ಹವ್ವಳ್ಳಿ ಕೃಷ್ಣೇಗೌಡ, ಸಮೀವುಲ್ಲಾ, ಚಂದ್ರಮೌಳಿ ಮತ್ತಿತರರಿದ್ದರು.
ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್‌ನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಸ್.ಎನ್.ಮಂಜುನಾಥ್, ಹವ್ವಳ್ಳಿ ಕೃಷ್ಣೇಗೌಡ, ಸಮೀವುಲ್ಲಾ, ಚಂದ್ರಮೌಳಿ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಸೂಚನೆ
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು. ಯಾವುದೇ ಕಾರಣಕ್ಕೂ ಯೋಜನೆಗಳು ದುರುಪಯೋಗವಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್‌ನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯಡಿ ಸವಲತ್ತು ಪಡೆಯುತ್ತಿದ್ದ ಒಟ್ಟು ೪,೫೫೬ ಫಲಾನುಭವಿಗಳು ಮರಣ ಹೊಂದಿದ್ದು, ಈ ಪೈಕಿ ೧,೦೧೨ ಮರಣ ಹೊಂದಿದ ಫಲಾನುಭವಿಗಳ ಖಾತೆಯಿಂದ ರೂ. ೧,೧೦,೫೭,೮೩೪ ಗಳನ್ನು ಹಿಂಪಡೆದು ಸರ್ಕಾರದ ನಿಧಿಗೆ ಜಮೆ ಮಾಡಲಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಕುಟುಂಬದವರು ಸ್ವ ಇಚ್ಛೆಯಿಂದ ಅರ್ಜಿ ನೀಡಿ ಯೋಜನೆಯಿಂದ ಹೊರಗುಳಿಯಬೇಕು. ಅರ್ಹರಿಗೆ ಈ ಸೌಲಭ್ಯ ದೊರೆಯಬೇಕು ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ತಲಾ ಎರಡು ಸಾವಿರ ರೂ.ನಂತೆ ೩೨ ಕಂತುಗಳು ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ೮೦ ಕ್ಲಸ್ಟರ್‌ಗಳ ವ್ಯಾಪ್ತಿಯಲ್ಲಿನ ಅಂಗನವಾಡಿ, ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಕಚೇರಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳಿಂದ ಸಸಿಗಳನ್ನು ನೆಡಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಗಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಗೃಹಜ್ಯೋತಿಯಲ್ಲಿ ಉಚಿತ ವಿದ್ಯುತ್ ಯೋಜನೆಯಡಿ ೩,೧೨,೬೭೮ ಮೀಟರ್‌ಗಳಿಗೆ ೪೦೬ ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ ೭.೧೬ ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಇದಕ್ಕೆ ೨೮೧.೬೭ ಕೋಟಿ ರೂ. ಭರಿಸಲಾಗಿದೆ ಎಂದು ತಿಳಿಸಿದರು.
ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಕೊನೆಯ ದಿನಾಂಕದವರೆಗೂ ಕಾಯದೆ ಶೀಘ್ರವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಅನ್ನಭಾಗ್ಯ ಯೋಜನೆಯಡಿ ೮,೨೬,೪೭೪ ಫಲಾನುಭವಿಗಳು ನೋಂದಣಿಯಾಗಿದ್ದು, ಯೋಜನೆ ಪ್ರಾರಂಭವಾದAದಿನಿAದ ಈವರೆಗೆ ೩೮೭.೧೧ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.
ಆಹಾರ ಇಲಾಖೆಯ ಉಪನಿರ್ದೇಶಕ ಯೋಗಾನಂದ್ ಮಾತನಾಡಿ, ಜಿಲ್ಲೆಯಲ್ಲಿ ಇ-ಕೆವೈಸಿ ಕಾರ್ಯ ನಡೆಯುತ್ತಿರುವುದರಿಂದ ಈ ಮಾಹೆಯ ಪಡಿತರವನ್ನು ಸೆಪ್ಟಂಬರ್ ಮಾಹೆಯಲ್ಲಿ ಒಟ್ಟಿಗೆ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ಟೋಕನ್ ಕೊಡುವ ಪದ್ಧತಿ ರೂಪಿಸಿದರೆ ಅನುಕೂಲವಾಗುತ್ತದೆ. ಒಂದು ನ್ಯಾಯಬೆಲೆ ಅಂಗಡಿಯಲ್ಲಿ ಹೆಚ್ಚು ಕಾರ್ಡ್ಗಳಿದ್ದರೆ ಕ್ಯೂ ಜಾಸ್ತಿಯಾಗುತ್ತದೆ. ಇದನ್ನು ಸರಿಪಡಿಸುವಂತೆ ಸಲಹೆ ನೀಡಿದರು.
ಮತ್ತೆ ಆಹಾರ ಉಪನಿರ್ದೇಶಕರು ಮಾತನಾಡಿ, ಬೆಳಗ್ಗೆ ೭ ರಿಂದ ಮಧ್ಯಾಹ್ನ ೧೨ ಗಂಟೆ ಹಾಗೂ ಸಂಜೆ ೪ ರಿಂದ ರಾತ್ರಿ ೮ ಗಂಟೆಯವರೆಗೆ ಪಡಿತರ ವಿತರಿಸಬೇಕು. ಕೇಂದ್ರ ಸರ್ಕಾರದ ಪಡಿತರ ವಿತರಿಸುತ್ತಿರುವುದರಿಂದ ಬೆಳಗ್ಗೆ ೬ ಗಂಟೆಯಿAದಲೇ ನ್ಯಾಯಬೆಲೆ ಅಂಗಡಿ ತೆರೆಯಲಾಗುತ್ತಿದೆ. ಜನರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಪಡಿತರ ವಿತರಣೆಗೆ ಯಾರೂ ಕೂಡ ಹಣ ಪಾವತಿಸಬೇಕಾಗಿಲ್ಲ. ಒಂದು ವೇಳೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಪಡೆಯುತ್ತಿರುವ ಬಗ್ಗೆ ಲಿಖಿತವಾಗಿ ದೂರು ಕೊಟ್ಟರೆ ಕ್ರಮ ವಹಿಸಲಾಗುವುದು ಎಂದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೬,೨೨೬ ಪದವೀಧರರು ನೋಂದಣಿಯಾಗಿದ್ದು, ಜೂನ್ ಅಂತ್ಯದವರೆಗೆ ೧೭.೧೩ ಕೋಟಿ ರೂ.ಗಳನ್ನು ಹಾಗೂ ಡಿಪ್ಲೊಮಾ ಪದವಿ ಪಡೆದ ೮೪ ಮಂದಿಗೆ ೬.೪೫ ಲಕ್ಷ ರೂ.ಗಳನ್ನು ಸಂದಾಯ ಮಾಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಎನ್.ಮಂಜುನಾಥ್, ಹವ್ವಳ್ಳಿ ಕೃಷ್ಣೇಗೌಡ, ಸಮೀವುಲ್ಲಾ, ಚಂದ್ರಮೌಳಿ, ಹೇಮಾವತಿ ಹಾಗೂ ತಾಲೂಕು ಅಧ್ಯಕ್ಷರುಗಳು, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net