ರಾಜ್ಯ ಹೆದ್ದಾರಿ 27ರ ತೋರಣಮಾವು ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಬಸ್ ಅಡಿಯಲ್ಲಿ ಸಿಲುಕಿತ್ತು. ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರು ಬೈಕ್ ಸವಾರರನ್ನು ಆಂಬುಲೆನ್ಸ್‌ನಲ್ಲಿ ಚಿಕಿತ್ಸೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದರು.