ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಪ್ರಜಾಪಿತಾ ಬ್ರಹ್ಮಕುಮಾರೀಸ್, ಎನ್‌ಐಎಂಎ, ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ಧ ರಾಜಯೋಗಿನಿ ಡಾ.ದಾದಿ ಪ್ರಕಾಶ್‌ಮಣಿಜೀ ಅವರ ೧೯ನೇ ಪಾವನ ಪುಣ್ಯಸ್ಕೃತಿ ದಿನದ ಅಂಗವಾಗಿ ನಡೆದ ರಕ್ತದಾನ ಮಹಾಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವಂತ ಯುವಕರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಇದರಿಂದ ಆರೋಗ್ಯದ ಮೇಲೆ ಯಾವುದೇ ತೊಂದರೆ ಆಗುವುದಿಲ್ಲ. ಜೊತೆಗೆ ಹೊಸಚೈತನ್ಯ ಮೂಡಿಸುತ್ತದೆ. ಈ ಬಗ್ಗೆ ಪ್ರತಿ ಯೊಬ್ಬರು ಅರಿತುಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ರಕ್ತದಾನದಿಂದ ಸಂಕಷ್ಟದಲ್ಲಿರುವ ವ್ಯಕ್ತಿಗಳ ಜೀವ ಉಳಿಸಬಹುದಾಗಿದೆ. ಇದನ್ನರಿತು ಪ್ರತಿಯೊಬ್ಬರೂ ರಕ್ತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡಿದರೆ ಒಂದು ಪ್ರಾಣ ಉಳಿಸಿದ ಪುಣ್ಯ ಲಭಿಸುತ್ತದೆ. ಹೀಗಾಗಿ ರಕ್ತದಾನ ಅತ್ಯಂತ ಶ್ರೇಷ್ಟವಾಗಿದೆ ಎಂದರು.
ಬ್ರಹ್ಮಕುಮಾರೀಸ್ ಸಂಸ್ಥೆ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಲಕ್ಷ್ಮೀ ಮಾತನಾಡಿ, ರಾಜಯೋಗಿನಿ ಡಾ.ದಾದಿ ಪ್ರಕಾಶ್‌ಮಣಿಜೀ ಅವರ ಸ್ಮರಣಾರ್ಥ ಜಿಲ್ಲೆಯ ಹಲವು ಕಡೆಗಳಲ್ಲಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಎಲ್ಲ ತಾಲೂಕಿನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
ಕೆಲ ಅಪಘಾತ ಸಂದರ್ಭಗಳಲ್ಲಿ ರಕ್ತ ಸಿಗದೆ ಮೃತಪಡುತ್ತಿರುವ ಉದಾಹರಣೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತಿದ್ದು ಇದನ್ನರಿತು ಸಂಘ ಸಂಸ್ಥೆಗಳು ಆಯೋಜಿಸುತ್ತಿರುವ ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡುವುದರ ಮೂಲಕ ಇತರರ ಜೀವ ಉಳಿಸಲು ನೆರವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೆಡ್‌ಕ್ರಾಸ್ ಸಂಸ್ಥೆಯ ಪ್ರದೀಪ್‌ಗೌಡ, ಗ್ರಾಮಾಂತರ ಪ್ರದೇಶದಲ್ಲಿ ರಕ್ತದಾನ ಶಿಬಿರ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಯುವಕರಲ್ಲಿ ಹೆ ಚ್ಚು ಜಾಗೃತಿ ಮೂಡಿಸುವ ಜೊತೆಗೆ ಅಪಘಾತ ಸಂದರ್ಭದಲ್ಲಿ ರಕ್ತದಾನಕ್ಕೆ ಮುಂದಾಗಬೇಕೆಂಬ ಭಾವನೆ ಬರಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಳಸಾಪುರ ಪಿಡಿಓ ಚಂದನ್, ಲೈಪ್‌ಕೇರ್ ಸೆಂಟರ್‌ನ ಡಾ. ಅನೀತ್‌ಕುಮಾರ್, ವಿನಾಯಕ ಪ್ರೌಢಶಾಲೆಯ ಕಾರ್ಯದರ್ಶಿ ಗಣೇಶ್, ಸಹ ಶಿಕ್ಷಕ ಕೆ.ಎಚ್.ಗಂಗಾಧರ್, ಬ್ರಹ್ಮಕುಮಾರೀಸ್ ಸಂಚಾಲಕಿ ಬಿ.ಕೆ.ಲೀಲ ಮತ್ತಿತರರಿದ್ದರು.