ಉತ್ತಮ ಶಿಕ್ಷಣದಿಂದ ಆರೋಗ್ಯವಂತ ಸಮಾಜ ನಿರ್ಮಾಣ

ದೇವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನಾಲ್ಕು ಕೊಠಡಿಗಳ ಕಾಮಗಾರಿಯನ್ನು ಶಾಸಕ ಎಚ್.ಡಿ. ತಮ್ಮಯ್ಯ ಪರಿಶೀಲಿಸಿದರು.
ದೇವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನಾಲ್ಕು ಕೊಠಡಿಗಳ ಕಾಮಗಾರಿಯನ್ನು ಶಾಸಕ ಎಚ್.ಡಿ. ತಮ್ಮಯ್ಯ ಪರಿಶೀಲಿಸಿದರು.
Published on
ಕಡೂರು: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಆಶಯದಡಿ ಸರ್ಕಾರದ ಅನುದಾನದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ದೇವನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನಾಲ್ಕು ಕೊಠಡಿಗಳ ಕಾಮಗಾರಿ ಪ್ರಗತಿ ಪರಿಶೀಲಿಸಿ ಮಾತನಾಡಿ, ಆರೋಗ್ಯದ ಜತೆಗೆ ಶಿಕ್ಷಣವನ್ನು ನೀಡಿದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಶಾಲೆ ಕೊಠಡಿ ನಿರ್ಮಾಣದ ಕಾಮಗಾರಿಯಲ್ಲಿ ಯಾವುದೇ ರಾಜಿಯಿಲ್ಲ. ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷ ಅನುದಾನದಡಿ 50 ಲಕ್ಷ ರೂ. ವೆಚ್ಚದಲ್ಲಿ ಅತ್ಯುತ್ತಮವಾದ ನಾಲ್ಕು ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, 21ರಂದು ಈ ಕಟ್ಟಡಗಳು ಉದ್ಘಾಟನೆಗೊಳ್ಳುತ್ತಿವೆ ಎಂದು ಮಾಹಿತಿ ನೀಡಿದರು.
ಉಳಿದ ಶಾಲೆಯ ಕೊಠಡಿಗಳಿಗೆ ಮತ್ತು ಅಂಗನವಾಡಿಗಳಿಗೆ ಮತ್ತು ಶೌಚಗೃಹಗ ಸುಣ್ಣ ಬಣ್ಣಕ್ಕಾಗಿ 7 ಲಕ್ಷ ರೂ.ಅನುದಾನ ಬಿಡುಗಡೆಗೊಳಿಸಲಾಗಿದೆ. ಶಾಲಾ ವಾತಾವರಣ ಉತ್ತಮವಾಗಿರಬೇಕು. ಇಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ತಾಪಂ ಇಒ ಪ್ರವೀಣ್, ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಂಗಾಧರ್, ಚಂದ್ರಶೇಖರ್, ಲೋಕೋಪಯೋಗಿ ಇಲಾಖೆ ಎಇಇ ಮಲ್ಲಿಕಾರ್ಜುನ್, ಶಾಲೆಯ ಮುಖ್ಯಶಿಕ್ಷಕ ಮಂಜಾನಾಯ್ಕ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net