ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನ ವೀಕ್ಷಣೆಗೆ ಮುಕ್ತ

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ಕೊಟ್ಟಿಗೆಹಾರದಲ್ಲಿ ನಡೆದ ಡಿಜಿಟಲ್ ಕನ್ನಡ ಾಂಟ್ ಕಾರ್ಯಾಗಾರವನ್ನು ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಪ್ರದೀಪ್ ಕೆಂಜಿಗೆ ಉದ್ಘಾಟಿಸಿದರು. ಡಾ. ಸುಚಿತ್ರಾಕುಮಾರಿ, ಡಾ. ಅವಿನಾಶ್, ಪ್ರಜ್ವಲ್, ನಂದೀಶ್ ಬಂಕೇನಹಳ್ಳಿ, ಸತೀಶ್ ತರುವೆ, ಪೂರ್ಣೇಶ್, ಸಂಗೀತಾ ಇತರರಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ಕೊಟ್ಟಿಗೆಹಾರದಲ್ಲಿ ನಡೆದ ಡಿಜಿಟಲ್ ಕನ್ನಡ ಾಂಟ್ ಕಾರ್ಯಾಗಾರವನ್ನು ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಪ್ರದೀಪ್ ಕೆಂಜಿಗೆ ಉದ್ಘಾಟಿಸಿದರು. ಡಾ. ಸುಚಿತ್ರಾಕುಮಾರಿ, ಡಾ. ಅವಿನಾಶ್, ಪ್ರಜ್ವಲ್, ನಂದೀಶ್ ಬಂಕೇನಹಳ್ಳಿ, ಸತೀಶ್ ತರುವೆ, ಪೂರ್ಣೇಶ್, ಸಂಗೀತಾ ಇತರರಿದ್ದರು.
Published on
ಬಣಕಲ್: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನ ವೀಕ್ಷಣೆಗೆ ಮುಕ್ತವಾಗಿದ್ದು ಚಿಟ್ಟೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಎಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಪ್ರದೀಪ್ ಕೆಂಜಿಗೆ ಹೇಳಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ಕೊಟ್ಟಿಗೆಹಾರದಲ್ಲಿ ನಡೆದ ಡಿಜಿಟಲ್ ಕನ್ನಡ ಾಂಟ್ ಕಾರ್ಯಾಗಾರ ಮತ್ತು ಕನ್ನಡ ಕೈಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚಿಟ್ಟೆ ಉದ್ಯಾನದಲ್ಲಿ ಚಿಟ್ಟೆಗಳಿಗೆ ಸಂಬಂಧಿಸಿದ ಆತಿಥೇಯ ಸಸ್ಯಗಳನ್ನು ನೆಡಲಾಗಿದ್ದು ಮಡ್ ಪಡ್ಲಿಂಗ್ ಮತ್ತು ಆಹಾರ ಪೂರಕಗಳನ್ನು ಮಾಡಲಾಗಿದೆ. ಚಿಟ್ಟೆಗಳ ಕುರಿತಾದ ಮಾಹಿತಿ ಲಕಗಳನ್ನು ಉದ್ಯಾನದಲ್ಲಿ ಹಾಕಲಾಗಿದ್ದು ಚಿಟ್ಟೆಗಳ ಜಗತ್ತಿನ ವಿವರಗಳು ಜ್ಞಾನಾಸಕ್ತರಿಗೆ ಸಿಗಲಿದೆ. ಆರ್ಕಿಡ್‌ಗಳ ಮಹತ್ವ ಮತ್ತು ಸಂರಕ್ಷಣೆಯ ಅರಿವು ಮೂಡಿಸುವ ಆರ್ಕಿಡ್ ಲೋಕ ಪ್ರಮುಖ ಆಕರ್ಷಣೆಯಾಗಿದೆ. ರಂಗಮಂದಿರ ಮತ್ತು ವಸತಿಗೃಹದ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು ಕಾರ್ಯಾಗಾರ, ನಾಟಕ ಮುಂತಾದ ಚಟುವಟಿಕೆಗಳು ನಿರಂತರವಾಗಿ ನಡೆಯಲಿವೆ ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯ ರವೀಶ್ ಬಸಪ್ಪ ಮಾತನಾಡಿ, ಕುತೂಹಲ, ಜೀವನ ಪ್ರೀತಿ, ಜೀವನೋತ್ಸಾಹವನ್ನು ಮಕ್ಕಳು ಬೆಳೆಸಿಕೊಳ್ಳಬೇಕು. ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಕೃತಿಗಳನ್ನು ಮಕ್ಕಳು ಓದಬೇಕು ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ದೀಪಾ ಹಿರೇಗುತ್ತಿ ಮಾತನಾಡಿ, ತೇಜಸ್ವಿ ಅವರ ಮಿಲೇನಿಯಂ ಸರಣಿಯ ಪುಸ್ತಕಗಳು ಮಕ್ಕಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸುತ್ತವೆ. ತೇಜಸ್ವಿ ಪ್ರತಿಷ್ಠಾನ ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಆಶಯಗಳನ್ನು ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಕ್ರಿಯವಾಗಿಟ್ಟಿದೆ ಎಂದರು.
ಡಿಜಿಟಲ್ ಕನ್ನಡ ಾಂಟ್ ವಿನ್ಯಾಸಕಾರ ಮಂಜುನಾಥ್ ಅವರು ಡಿಜಿಟಲ್ ಕನ್ನಡ ಾಂಟ್ ಕುರಿತು ಮಾಹಿತಿ ನೀಡಿದರು. ತೇಜಸ್ವಿ ಪ್ರತಿಷ್ಠಾನದ ಸದಸ್ಯ ರವೀಶ್ ಬಸಪ್ಪ ಅವರು 2026ನೇ ಸಾಲಿನ ಕ್ಯಾಲೆಂಡರ್‌ನ ವಿನ್ಯಾಸ ಬಿಡುಗಡೆ ಮಾಡಿದರು. ಸದಸ್ಯೆ ದೀಪಾ ಹಿರೇಗುತ್ತಿ ಆರ್ಕಿಡ್ ಮಾಹಿತಿ ಲಕ ಉದ್ಘಾಟಿಸಿದರು. 
ತೇಜಸ್ವಿ ಪ್ರತಿಷ್ಠಾನದ ಆವರಣದಲ್ಲಿ ಕಂಡುಬರುವ ಅಪರೂಪದ ಚಿಟ್ಟೆಗಳ ಪರಿಚಯ ಲಕಗಳು ಮತ್ತು ಚಿಟ್ಟೆ ಉದ್ಯಾನ ಸಂಬಂಧಿತ ಮಾಹಿತಿ ಲಕವನ್ನು ಕಲಾವಿದ ಸುರೇಶ್‌ಚಂದ್ರ ದತ್ತ ಅನಾವರಣ ಮಾಡಿದರು. ಕೈಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 
ವಿಜ್ಞಾನಿ ಡಾ. ಸುಚಿತ್ರಾಕುಮಾರಿ, ಕೀಟತಜ್ಞ ಡಾ.ಅವಿನಾಶ್, ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಂಯೋಜಕ ಪ್ರಜ್ವಲ್, ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಪೂರ್ಣೇಶ್, ಸಂಗೀತಾ, ಸಿದ್ದಿಕ್, ಕಲಾವಿದರಾದ ಬಾಪು ದಿನೇಶ್, ಟಿ.ಡಿ.ಸುರೇಶ್, ಸಾಮಾಜಿಕ ಕಾರ್ಯಕರ್ತ ಸಂಜಯ ಗೌಡ, ರೈತ ಮುಖಂಡ ಗುರುಶಾಂತಪ್ಪ, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net