ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಮಳೆಗಾಗಿ ಪರ್ಜನ್ಯ ಜಪ

ಚಿಕ್ಕಮಗಳೂರು ಜಿಲ್ಲೆಯ ಕಿಗ್ಗಾದ ಶ್ರೀ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದಲ್ಲಿ ಮಳೆಗಾಗಿ ಪರ್ಜನ್ಯ ಜಪ ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಕಿಗ್ಗಾದ ಶ್ರೀ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದಲ್ಲಿ ಮಳೆಗಾಗಿ ಪರ್ಜನ್ಯ ಜಪ ನಡೆಯಿತು.
Published on
ಚಿಕ್ಕಮಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗಲಿ ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲಾಗಿದೆ. ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿರುವ ಶೃಂಗೇರಿ ತಾಲೂಕಿನ ಕಿಗ್ಗಾದ ಇತಿಹಾಸ ಪ್ರಸಿದ್ಧ ಶ್ರೀಋಷ್ಯಶೃಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪರ್ಜನ್ಯ ಜಪ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡ ಅವರ ಸಮ್ಮುಖದಲ್ಲಿ ಈ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಮಳೆಯ ಅಭಾವದಿಂದ ಕಂಗಾಲಾಗಿರುವ ಜನತೆ ಹಾಗೂ ರೈತಾಪಿ ವರ್ಗಕ್ಕೆ ಅನುಕೂಲವಾಗಲಿ ಮತ್ತು ನಾಡು ಸುಭಿಕ್ಷವಾಗಿರಲಿ ಎಂಬ ಉz್ದೆÃಶದಿಂದ ಶಾಸಕರು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿದರು.
ಕ್ಷೇತ್ರದ ಇತಿಹಾಸ ಪ್ರಸಿದ್ಧ ಶ್ರೀ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ಆರು ಜನ ಪರಿಣಿತ ಋತ್ವಿಜರ ನೇತೃತ್ವದಲ್ಲಿ ಶಾಸ್ತೊçÃಕ್ತವಾಗಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಮಳೆಯನ್ನು ಕರುಣಿಸುವಂತೆ ಕೋರಿ ಋತ್ವಿಜರು ಏಕ ರುದ್ರಾಭಿಷೇಕ ಹಾಗೂ ಶಕ್ತಿಶಾಲಿ ಪರ್ಜನ್ಯ ಜಪವನ್ನು ಸತತವಾಗಿ ಪಠಿಸಿದರು.
ಪುರಾಣ ಹಾಗೂ ಇತಿಹಾಸ ಪ್ರಸಿದ್ಧ ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರೆ ಒಣಗಿದ ಭೂಮಿಗೂ ಮಳೆ ಬರುತ್ತದೆ ಎಂಬ ಬಲವಾದ ನಂಬಿಕೆ ತಲೆಮಾರುಗಳಿಂದ ನಡೆದುಬಂದಿದೆ. ಬರಗಾಲದ ಸಂದರ್ಭದಲ್ಲಿ ಇಲ್ಲಿ ಪೂಜೆ ಸಲ್ಲಿಸುವುದು ಮಲೆನಾಡಿನ ಭಾಗದಲ್ಲಿ ಇಂದಿಗೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದು, ಮಳೆಗಾಗಿ ಋಷ್ಯಶೃಂಗೇಶ್ವರನಲ್ಲಿ ಜಂಟಿಯಾಗಿ ಪ್ರಾರ್ಥನೆ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net