ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರದ ಕೃಷಿ ಸಾಲ ಯೋಜನೆಯಡಿ ೨೦೨೫-೨೬ನೇ ಸಾಲಿನಲ್ಲಿ ಜಿಲ್ಲೆಗೆ ೭೫,೧೧೯ ರೈತರಿಗೆ ೧,೦೧೭.೧೯ ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ್ತು. ಮಾರ್ಚ್ ೨೦೨೬ರ ಅಂತ್ಯಕ್ಕೆ ೫೪,೯೯೨ ರೈತರಿಗೆ ೮೪೩.೮೪ ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸಲಾಗಿದೆ. ೨೦೨೬-೨೭ನೇ ಸಾಲಿನಲ್ಲಿ ೧,೦೦೯ ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದರು.