ರಾಷ್ಟ್ರೀಯ ಹಬ್ಬಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿ (National Festival)
ಎನ್.ಆರ್.ಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರೃ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು. ಡಾ.ನೂರುಲ್‌ಹುದಾ, ಶಬಾನಾ ಅಂಜುಮ್, ವೇಣುಗೋಪಾಲ, ಆರ್.ವಿ.ಮಂಜುನಾಥ್ ಇತರರಿದ್ದರು.
Published on:
Copied
Follow Us
ಎನ್.ಆರ್.ಪುರ: ರಾಷ್ಟ್ರೀಯ ಹಬ್ಬಗಳಲ್ಲಿ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು ಸಹ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ, ತಹಸೀಲ್ದಾರ್ ಡಾ. ನೂರುಲ್ ಹುದಾ ಹೇಳಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರೃ ದಿನಾಚರಣೆ ಮತ್ತು ಡಿ.ದೇವರಾಜು ಅರಸು ಜನ್ಮ ದಿನಾಚರಣೆ ಆಯೋಜಿಸುವ ಬಗ್ಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸಹ ಭಾಗವಹಿಸಬೇಕು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಭೆಗೆ ಎಲ್ಲ ಇಲಾಖೆಯ ಮುಖ್ಯಸ್ಥರು ಭಾಗವಹಿಸುವಂತೆ ನೋಟಿಸ್ ನೀಡಿದ್ದರೂ ಸಹ ಪ್ರತಿನಿಧಿಗಳನ್ನು ಕಳುಹಿಸುತ್ತಾರೆ. ಪ್ರತಿನಿಧಿಗಳನ್ನು ಕಳುಹಿಸಿದರೆ ಅವರನ್ನು ಗೈರು ಹಾಜರಿ ಎಂದು ಪರಿಗಣಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು. ಸಭಾ ಕಾರ್ಯಕ್ರಮದಲ್ಲಿ ಭಾಷಣಗಳನ್ನು ಸೀಮಿತಗೊಳಿಸಿ ಮಕ್ಕಳ ಕಾರ್ಯಕ್ರಮಕ್ಕೆ ಹೆಚ್ಚು ಆದ್ಯತೆ ನೀಡಬೇಕು. ನಿಗದಿತ ಅವಯೊಳಗೆ ಕಾರ್ಯಕ್ರಮಗಳು ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು. ಎಲ್ಲ ಇಲಾಖೆಯ ಅಧಿಕಾರಿಗಳು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಪೂರ್ಣಗೊಳ್ಳುವವರೆಗೆ ಇರಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು. ಸಭಾ ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಣ ಇಲಾಖೆಗೆ ವಹಿಸಲಾಯಿತು.
ಗ್ರಾಮ ಪಂಚಾಯಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜುದಾರರು, ಅಂಗನವಾಡಿ ಕಾರ್ಯಕರ್ತೆಯರು, ಕೃಷಿಯಲ್ಲಿ ಸಾಧನೆ ಮಾಡಿದವರು, ಅಗ್ನಿಶಾಮಕ ಇಲಾಖೆಯ ತಲಾ ಒಬ್ಬರು ಸೇರಿದಂತೆ ಒಟ್ಟು 4 ಜನರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಬಿಇಒ ಶಬಾನಾ ಅಂಜುಮ್, ಶಿರಸ್ತೇದಾರ್ ವೇಣುಗೋಪಾಲ, ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಪಾಟೀಲ್, ಕಂದಾಯ ನಿರೀಕ್ಷಕ ಮಂಜುನಾಥ್, ಎಇಇ ಸಾಗರ್, ಸುನಿಲ್, ವಿವಿಧ ಸಂಘಸಂಸ್ಥೆಗಳ ಎಚ್.ಎಂ.ಶಿವಣ್ಣ, ಭಾಗ್ಯಾ ನಂಜುಂಡಸ್ವಾಮಿ, ಜುಬೇದಾ, ವಾಲ್ಮೀಕಿ ಶ್ರೀನಿವಾಸ್, ಪವಿತ್ರಾ ಇದ್ದರು.