ತಾಲೂಕಿನ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಕುಮಾರ್ ಎಂಬವರು ಮದ್ಯಸೇವಿಸಿ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಕಡೂರು ಪೊಲೀಸ್ ಠಾಣೆಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಮಾ.16 ರಂದು ಕಡೂರಿನ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎ್ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ವೇಳೆ ಆರೋಪಿ ರಂಜಿತ್ ಕುಮಾರ್ ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಕೇವಲ ದಂಡ ವಿಧಿಸದೆ ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಮ್ಯುನಿಟಿ ಸೇವೆ ಮಾಡುವಂತೆ ಆದೇಶಿಸಿದ್ದರು.