ತಲ್ವಾರ್ ನಿಂದ ಕೇಕ್ ಕತ್ತರಿಸಿದವನ ವಿರುದ್ಧ ದೂರು ದಾಖಲು

ಕ್ರೈಂ
ಕ್ರೈಂ
Published on

ಪ್ರಮುಖ ಮುಖ್ಯಾಂಶಗಳು

  • ತಲ್ವಾರ್ ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಯುವಕ
  • ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು
ಚಿಕ್ಕಮಗಳೂರು: ಜನ್ಮದಿನದ ಅಂಗವಾಗಿ ಸಾರ್ವಜನಿಕ ಪ್ರದೇಶದಲ್ಲಿ ತಲ್ವಾರ್ ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಯುವಕನ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಿಪ್ಪು ನಗರದ ಎರಡನೇ ಕ್ರಾಸ್ ನಿವಾಸಿ ಮಹಮ್ಮದ್ ಸಮೀರ್ ಎಂಬಾತನ್ನ ವಿರುದ್ಧ ದೂರು ದಾಖಲಾಗಿದೆ. ಈತ ಸ್ನೇಹಿತರೊಂದಿಗೆ ವಾಜಪೇಯಿ ಲೇಔಟ್ ನ ರಸ್ತೆಯಲ್ಲಿ ಕಾರ್ ಬ್ಯಾನೆಟ್ ಮೇಲೆ ಕೇಕ್ ಇಟ್ಟು ಅದನ್ನು ತಲವಾರ್ ನಿಂದ ಕತ್ತರಿಸಿ ಸಂಭ್ರಮಿಸಿದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದ. ಈ ವಿಡಿಯೋ ಗಮನಿಸಿದ ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net