ತರೀಕೆರೆ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಜತೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ತಾಲೂಕು ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಕಾರ್ಯಕರ್ತರ ಜತೆಗೂಡಿ ಪಟ್ಟಣದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟಿಸಿದರು.
ಪ್ರತಿಭಟನಾಕಾರರು ಟಿಕೆಟ್‌ಕೌಂಟರ್ ಬಳಿ ತೆರಳಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ರೈಲ್ವೆ ಹಾಗೂ ಸ್ಥಳೀಯ ಠಾಣೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಕೇಂದ್ರ ಸರ್ಕಾರದ ಆಡಳಿತ ವೈಲ್ಯದಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿ ದಿನ ಬಳಕೆ ವಸ್ತುಗಳು ದುಬಾರಿಯಾಗಿದೆ. ಇದರಿಂದ ಉನ್ನತ ವ್ಯಾಸಾಂಗದ ಕನಸು ಕಂಡಿರುವ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಜನ ಸಾಮಾನ್ಯರ ಆರ್ಥಿಕ ಪರಿಸ್ಥಿತಿ ಬಿಗಡಾಯಿಸುವಂತಾಗಿದೆ ಎಂದು ಆರೋಪಿಸಿದರು.
ಶಾಸಕ ಜಿ.ಎಚ್.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಾರೂಕ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್, ಮಾಜಿ ಅಧ್ಯಕ್ಷ ಕೆ.ಎಂ.ಸಂತೋಷ್, ತಾಲೂಕು ಅಧ್ಯಕ್ಷ ಧವನ್, ಅಜ್ಜಂಪುರ ಪಪಂ ಸದಸ್ಯ ನಿಸಾರ್ ಅಹ್ಮದ್ ಮತ್ತಿತರರಿದ್ದರು.