ಕೊಪ್ಪದಲ್ಲಿ ನಡೆಯುವ ಕಾರ್ಯಕರ್ತರ ಸಮ್ಮಿಲನ ಹಾಗೂ ಜನ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆಯನ್ನು ಗೇರ್‌ಬೈಲ್‌ನಟರಾಜ್ ಅನಾವರಣಗೊಳಿಸಿದರು.
Published on:
Copied
Follow Us
ಎನ್.ಆರ್.ಪುರ: ನೂತನ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಾರಥ್ಯದಲ್ಲಿ ಕಾಂಗ್ರೆಸ್ ಮತ್ತಷ್ಟು ಸದೃಢವಾಗಲಿದೆ ಎಂದು ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೇರ್‌ಬೈಲ್‌ನಟರಾಜ್ ಹೇಳಿದರು.
ಮುಂಬರುವ 2028ರ ವಿಧಾನಸಭಾ ಚುನಾವಣೆಯನ್ನು ಡಿ.ಕೆ.ಶಿವಕುಮಾರ್ ಹಾಗೂ ಬಿ.ಕೆ.ಹರಿಪ್ರಸಾದ್ ಜೋಡೆತ್ತಿನ ರೀತಿಯಲ್ಲಿ ಶ್ರಮಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆಗೆ ಏರಿಸಲಿದ್ದಾರೆ. ಇವರಿಬ್ಬರ ನೇತೃತ್ವದಲ್ಲಿ ಕಾಂಗ್ರೆಸ್ ಬಲಷ್ಠವಾಗಲಿದೆ ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಂಬಿಕೆಯಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ವರ್ಷ ಸುಮಾರು 60 ಸಾವಿರ ಕೋಟಿ. ಹಣವನ್ನು ನೀಡುವ ಮೂಲಕ ಜನರ ಜೀವನ ಮಟ್ಟ ಉತ್ತಮಗೊಳಿಸುವ ಜತೆಗೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ರಾಜ್ಯದ ಡಿಜಿಪಿ ದರವನ್ನು ವೃದ್ಧಿಗೊಳಿಸಿದ್ದಾರೆ. ತಲಾ ಅದಾಯದಲ್ಲೂ ದೇಶಕ್ಕೆ ಪ್ರಥಮ ಸ್ಥಾನಗಳಿಸುವಂತೆ ಮಾಡಿದ್ದಾರೆ ಎಂದರು.