ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರ ಪಟ್ಟಿ ಶುದ್ಧೀಕರಣಕ್ಕಾಗಿ ದಶಕಗಳಿಂದಲೂ ನಡೆದುಕೊಂಡು ಬಂದಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದೆ. ಎಸ್‌ಐಆರ್ ಎಂಬುದು ನಿಯಮಿತವಾಗಿ ನಡೆಯುವ ಸಾಂಪ್ರದಾಯಿಕ ಪ್ರಕ್ರಿಯೆಯಾಗಿದ್ದು, 1952 ಮತ್ತು 1957ರಲ್ಲಿ ಜವಾಹರಲಾಲ್ ನೆಹರು ಹಾಗೂ 1967 ಮತ್ತು 1977ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಕಾಲದಲ್ಲೂ ನಡೆದಿದೆ ಎಂಬುದನ್ನು ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳಬೇಕು ಎಂದರು.