ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು

ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನಾ ಸೃಜನ್ ಅಭಿಯಾನ ಅಂಗವಾಗಿ ಆಯೋಜಿಸಲಾಗಿದ್ದ ಸಭೆಯನ್ನು ಉz್ದÉÃಶಿಸಿ ಎಐಸಿಸಿ ವೀಕ್ಷಕ ಬಿಶ್ವರಂಜನ್ ಮೊಹಂತಿ ಮಾತನಾಡಿದರು.
ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನಾ ಸೃಜನ್ ಅಭಿಯಾನ ಅಂಗವಾಗಿ ಆಯೋಜಿಸಲಾಗಿದ್ದ ಸಭೆಯನ್ನು ಉz್ದÉÃಶಿಸಿ ಎಐಸಿಸಿ ವೀಕ್ಷಕ ಬಿಶ್ವರಂಜನ್ ಮೊಹಂತಿ ಮಾತನಾಡಿದರು.
Published on
ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾAಧಿ ಅವರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ ಜಿಲ್ಲೆ ಚಿಕ್ಕಮಗಳೂರು. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು ಎಂದು ಎಂದು ಎಐಸಿಸಿ ವೀಕ್ಷಕ ಬಿಶ್ವರಂಜನ್ ಮೊಹಂತಿ ಕರೆನೀಡಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನಾ ಸೃಜನ್ ಅಭಿಯಾನ ಅಂಗವಾಗಿ ಆಯೋಜಿಸಲಾಗಿದ್ದ ಸಭೆಯನ್ನು ಉz್ದೆÃಶಿಸಿ ಮಾತನಾಡಿದ ಅವರು, ದೇಶದಾದ್ಯಂತ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಹೊರರಾಜ್ಯಗಳ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಅದರಂತೆ ತಮಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಸಂಚಾರ ನಡೆಸಿ ಸ್ಥಳೀಯ ಪದಾಧಿಕಾರಿಗಳು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಣೆ ಮಾಡಲಾಗುತ್ತಿದೆ ಎಂದರು.
ಕರ್ನಾಟಕ ಪವಿತ್ರ ಭೂಮಿ. ಕಾಂಗ್ರೆಸ್ ಅತಿ ಹೆಚ್ಚು ಸದೃಢವಾಗಿರುವ ನೆಲವು ಕರ್ನಾಟಕ. ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಜಿಲ್ಲಾಧ್ಯಕ್ಷರ ಆಯ್ಕೆಗೆ ಪ್ರತಿ ಬ್ಲಾಕು ತರಲಿನ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಪದ್ಧತಿ ಇರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಹೊರ ರಾಜ್ಯದಿಂದ ಬಂದಿರುವ ವೀಕ್ಷಕರು ಇಲ್ಲಿನ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅದನ್ನು ನೇರವಾಗಿ ಪಕ್ಷದ ವರಿಷ್ಠರಿಗೆ ತಲುಪಿಸಲಿದ್ದಾರೆ ಎಂದು ಹೇಳಿದರು.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಒತ್ತು ನೀಡಬೇಕಿದೆ. ಕ್ಷೇತ್ರದಲ್ಲಿ ೨.೨೯ ಲಕ್ಷ ಮತದಾರರಿದ್ದು ಅವರನ್ನು ನೋಂದಣಿ ಮಾಡಿಸುವ ಕೆಲಸವನ್ನು ತುರ್ತಾಗಿ ಮಾಡಬೇಕಿದೆ. ಚಿಕ್ಕಮಗಳೂರು ನಗರದಲ್ಲಿ ೭೫ ಸಾವಿರ, ಕಸಬಾ ಜಾಗರ, ಲಕ್ಯಾ ಭಾಗದಲ್ಲಿ ೭೦ ಸಾವಿರ ಹಾಗೂ ಸಖರಾಯಪಟ್ಟಣ ಭಾಗದಲ್ಲಿ ೪೫ಸಾವಿರ ಮತದಾರರ ನೋಂದಣಿ ಮಾಡಲಾಗಿದೆ. ಇನ್ನು ಕೇವಲ ಎಸ್‌ಐಆರ್ ಪ್ರಕ್ರಿಯೆಗೆ ಏಳು ದಿನಗಳ ಅವಧಿ ಮಾತ್ರ ಇದ್ದು ಇನ್ನುಳಿದ ಮತದಾರರ ನೋಂದಣಿಗೆ ಕಾರ್ಯಕರ್ತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸAದೀಪ್ ಮಾತನಾಡಿ, ೭೫೦ ಜಿಲ್ಲಾಧ್ಯಕ್ಷರ ಆಯ್ಕೆಗಳಿಗೆ ಬೇರೆಬೇರೆ ರಾಜ್ಯಗಳ ವೀಕ್ಷಕರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅದರಲ್ಲಿ ಆರು ಜನರ ಹೆಸರನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ಗೆ ಶಿಫಾರಸ್ಸು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಪಿ.ಅಂಶುಮAತ್ ಮಾತನಾಡಿ, ನೂತನ ಜಿಲ್ಲಾಧ್ಯಕ್ಷರ ಆಯ್ಕೆಗೆ ಸಂಬAಧಿಸಿದAತೆ ಪ್ರತಿ ಬ್ಲಾಕ್ ಗಳಿಗೂ ಭೇಟಿ ನೀಡಿ ಸಭೆ ನಡೆಸಿ ಅಲ್ಲಿನ ಪದಾಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಈ ಮೂಲಕ ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಪ್ರಮುಖರಾದ ಡಾ.ಡಿ.ಎಲ್.ವಿಜಯ್ ಕುಮಾರ್, ಮೋಹನ್, ಎಂ.ಎಲ್.ಮೂರ್ತಿ, ಎಚ್.ಎಚ್.ದೇವರಾಜ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net