ಸುಸಜ್ಜಿತ ಹೈಟೆಕ್ ಕಾಲೇಜು ನಿರ್ಮಾಣ

ಕಡೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರೋಪದಲ್ಲಿ ಕುವೆಂಪು ವಿವಿಯ ಸ್ನಾತಕೋತ್ತರ ವಿಭಾಗದಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಾಸಕ ಕೆ.ಎಸ್.ಆನಂದ್, ಇಂದುಮತಿ ಸಾಲಿಮಠ್, ಡಾ. ಕೆ.ಎ.ರಾಜಣ್ಣ, ಧನಂಜಯ್, ರವಿ ಮತ್ತಿತರರಿದ್ದರು.
ಕಡೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರೋಪದಲ್ಲಿ ಕುವೆಂಪು ವಿವಿಯ ಸ್ನಾತಕೋತ್ತರ ವಿಭಾಗದಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಾಸಕ ಕೆ.ಎಸ್.ಆನಂದ್, ಇಂದುಮತಿ ಸಾಲಿಮಠ್, ಡಾ. ಕೆ.ಎ.ರಾಜಣ್ಣ, ಧನಂಜಯ್, ರವಿ ಮತ್ತಿತರರಿದ್ದರು.
Published on
ಕಡೂರು: ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದ ಐದು ಎಕರೆ ಜಾಗವನ್ನು ಪ್ರಥಮ ದರ್ಜೆ ಕಾಲೇಜು ನಿರ್ಮಾಣದ ಉದ್ದೇಶಕ್ಕಾಗಿ ಕಾನೂನಾತ್ಮಕವಾಗಿ ವರ್ಗಾಯಿಸಿಕೊಂಡಿದ್ದು 2 ವರ್ಷದಲ್ಲಿ 50 ಕೋಟಿ ರೂ. ವೆಚ್ಚದ ಸುಸಜ್ಜಿತ ಹೈಟೆಕ್ ಕಾಲೇಜು ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಪಟ್ಟಣದ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ 2025-26ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರೋಪ ಉದ್ಘಾಟಿಸಿ ಮಾತನಾಡಿ, ಕಡೂರು ಪದವಿ ಕಾಲೇಜಿಗೆ ತನ್ನದೇ ಆದ ಇತಿಹಾಸವಿದೆ. ಸುಮಾರು ಎರಡು ಸಾವಿರ ಮಕ್ಕಳಿಗೆ ವಿದ್ಯಾರ್ಜನೆ ನೀಡುವ ಕಾಲೇಜಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸಲು ಒತ್ತು ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಲೇಜನ್ನು ಕನಕವೃತ್ತದಲ್ಲಿರುವ ಗಾಣಾದಾಳು ಬಳಿ ಇರುವ ಜಾಗಕ್ಕೆ ಸ್ಥಳಾಂತರಿಸುವ ಗುರಿ ಹೊಂದಲಾಗಿತ್ತು. ಅದರಂತೆ ಅರಣ್ಯ ಇಲಾಖೆ ಜಾಗವನ್ನು ಕಾಲೇಜು ಕಟ್ಟಡ ನಿರ್ಮಾಣ ಮಾಡಲು ಇದ್ದ ಅಡೆತಡೆಗಳನ್ನು ನಿವಾರಿಸಿಕೊಂಡು ಇದೀಗ 5 ಎಕರೆ ಜಾಗಕ್ಕೆ ಕಾಲೇಜು ಹೆಸರಿನಲ್ಲಿ ಪಹಣಿ ಲಭಿಸಿದೆ ಎಂದರು.
ರಾಜ್ಯ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ದಿಟ್ಟ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ. ಈ ವರ್ಷ 56 ಸಾವಿರ ಸರ್ಕಾರಿ ಉದ್ಯೋಗಗಳನ್ನು ಕಲ್ಪಿಸಿಕೊಡಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಹಾಸ್ಯ ಭಾಷಣಗಾರ್ತಿ ಇಂದುಮತಿ ಸಾಲಿಮಠ್ ತಮ್ಮ ತಿಳಿ ಹಾಸ್ಯದ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಖ್ಯಾತ ಗಾಯಕ ಸಿದ್ದರಾಮ ಕೇಸಾಪುರ್ ಜಾನಪದ ಹಾಡುಗಳ ಗಾಯನದ ಮೂಲಕ ಎಲ್ಲರ ಗಮನ ಸೆಳೆದರು. ಕುವೆಂಪು ವಿವಿ ಸ್ನಾತಕೋತ್ತರ ವಿಭಾಗದಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಪ್ರಾಚಾರ್ಯ ಪ್ರೊ. ಡಾ. ಕೆ.ಎ.ರಾಜಣ್ಣ, ಕಾಲೇಜು ಸಮಿತಿ ಸದಸ್ಯರಾದ ಸಪ್ತಕೋಟೆ ಧನಂಜಯ್, ಕೆ.ರವಿ, ಉಪನ್ಯಾಸಕರಾದ ಕುಮಾರ್, ಸೋಮಶೇಖರ್, ಪುಷ್ಪಭಾರತಿ, ಡಾ. ಸಂಪತ್‌ಕುಮಾರ್, ತಿಮ್ಮರಾಜು, ಓಂಕಾರಯ್ಯ, ಜ್ಯೋತಿ, ಎಚ್.ಎಸ್.ಸವಿತಾ, ಭಂಡಾರಿ ಬಸವರಾಜ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net