ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಸಿಪಿಐ ಪ್ರತಿಭಟನೆ

ಚಿಕ್ಕಮಗಳೂರು ಆಜಾದ್ ಪಾರ್ಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ ಕಾರ್ಯಕರ್ತರು ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿದರು.
ಚಿಕ್ಕಮಗಳೂರು ಆಜಾದ್ ಪಾರ್ಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ ಕಾರ್ಯಕರ್ತರು ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿದರು.
Published on
ಚಿಕ್ಕಮಗಳೂರು: ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಖಜಾಂಚಿ ರೇಣುಕಾರಾಧ್ಯ ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ೨೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ನೈತಿಕ ಹೊಣೆ ಹೊತ್ತಿರುವ ಧಮೇಂದ್ರ ಪ್ರಧಾನ್ ಅವರು ರಾಜೀನಾಮೆ ಸಲ್ಲಿಸಬೇಕು ಎಂದರು.
ನೀಟ್ ಪ್ರಶ್ನೆ ಪತ್ರಿಕೆ ದೇಶದ ದೊಡ್ಡ ಹಗರಣದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷö್ಯ, ನಾಚಿಕೆಗೇಡಿತನ ಸಂಗತಿ. ಮೋದಿಯವರು ಈ ಹಗರಣದ ಬಗ್ಗೆ ಇಂದಿಗೂ ಮಾತನಾಡದಿರುವುದು ಭ್ರಷ್ಟಾಚಾರವನ್ನು ಪೋ ಷಿಸುವ ಕೇಂದ್ರ ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದರು.
ಶಿಕ್ಷಣ ವ್ಯವಸ್ಥೆ ಸುಧಾರಣೆಗಾಗಿ ಪರಿಸರ ಹೋರಾಟಗಾರ ಶಾಂತಿಯುತ ಪ್ರತಿಭಟನೆ ನಡೆಸಿದರೆ, ಕೇಂ ದ್ರ ಸರ್ಕಾರ ಬಲವಂತವಾಗಿ ಪೊಲೀಸ್ ಬಲಪ್ರಯೋಗಿಸಿ ಒಡೆದಟ್ಟುವುದು, ಅಶ್ರುವಾಯು ಪ್ರಯೋಗಿಸಿ ಪ್ರ ತಿಭಟನಾಕಾರರನ್ನು ಒಕ್ಕಲೆಬ್ಬಿಸುವ ಜೊತೆಗೆ ಬಂಧಿಸುವ ಕುತಂತ್ರ ನಡೆಸುತ್ತಿದೆ ಎಂದು ದೂರಿದರು.
ನೀಟ್ ಪರೀಕ್ಷೆಯಲ್ಲಿ ಹಲವಾರು ಕನಸು ಕಟ್ಟಿಕೊಂಡಿದ್ಧ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾ ದರೆ ಅವರನ್ನು ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಹಾಗೂ ಸಂವಿ ಧಾನ ವಿರೋಧಿ ನಡೆ ಅನುಸರಿಸುತ್ತಿರುವುದು ನಿಜವಾದ ನ್ಯಾಯವಲ್ಲ ಎಂದು ಹೇಳಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ರಘು ಮಾತನಾಡಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಕನಸನ್ನು ಕೇಂದ್ರ ಸರ್ಕಾರ ಪ್ರಶ್ನೆ ಪತ್ರಿಕೆ ಸೋರಿಕೆಗೊಳಿಸುವ ಮೂಲಕ ಭವಿಷ್ಯವನ್ನು ಕಸಿದುಕೊಂಡಿದೆ. ಈ ವಿರುದ್ಧ ಪ್ರಶ್ನಿಸಿದರೆ ಲಾಠಿ, ಬೂಟು ಹಾಗೂ ಮನಬಂದAತೆ ನಿಂದಿಸುವ ಮೂಲಕ ಪ್ರತಿಭಟಕಾರರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಸಿ.ವಸಂತ್‌ಕುಮಾರ್ ಮಾತನಾಡಿ ಬಡವರು, ಮಧ್ಯಮ ವರ್ಗದವ ರೇ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ. ಈ ಹಿಂದೆ ಪಾಲಕರ ಶ್ರಮ ಬಹಳಷ್ಟಿದೆ. ಆದರೆ ಕೇಂದ್ರ ಶಿಕ್ಷಣ ಸಚಿವರು ಈ ಶ್ರಮದ ಫಲವನ್ನು ನೂಚ್ಚುನೂರು ಮಾಡುವಂತೆ ಮಾಡಿರುವುದು ದೇಶದ ಬೆಳ ವಣಿಗೆಗೆ ಒಳಿತಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್, ಜಿಲ್ಲಾ ಮಂಡಳಿ ಸದಸ್ಯೆ ರಾಧಾ ಸುಂದ್ರೇಶ್, ಸಹ ಕಾರ್ಯದರ್ಶಿ ಸೋಮೇಗೌಡ, ಮುಖಂಡರುಗಳಾದ ಜಯಕುಮಾರ್, ಮಂಜೇ ಗೌಡ, ಜಾನಕಿ, ಜಯಾನಂದ್, ಯಶೋಧ್, ರಮೇಶ್ ಮುಂತಾದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net