ಲಿಂಗದಹಳ್ಳಿ: ನಂದಿಬಟ್ಟಲು, ತಣಿಗೆಬೈಲು, ಹುಣಸೆಬೈಲು, ಜೈಪುರ ಮುಂತಾದ ಗ್ರಾಮಗಳ ವ್ಯಾಪ್ತಿಯಲ್ಲಿ ತೆಂಗು, ಅಡಿಕೆ, ಮಾವು, ಹಲಸು, ಕಾಫಿ, ಕಾಳುಮೆಣಸು ಬೆಳೆಗಳನ್ನು ಕಾಡಾನೆಗಳು ತುಳಿದು, ಮುರಿದು ನಾಶಪಡಿಸುತ್ತಿರುವುದರಿಂದ ಈ ಭಾಗದ ತೋಟದ ಬೆಳೆಗಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ ಎಂದು ನಂದಿಬಟ್ಟಲು ಗ್ರಾಪಂ ಮಾಜಿ ಅಧ್ಯಕ್ಷ ಎನ್.ಪಿ.ಕೃಷ್ಣೇಗೌಡ ತಿಳಿಸಿದರು.