ಚಿಕ್ಕಮಗಳೂರು:ರಾಷ್ಟಿçÃಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ೨೦೦೬ರ ಏಪ್ರಿಲ್ ೧ರ ನಂತರ ಕರ್ನಾಟಕ ಸರ್ಕಾರಿ ಸೇವೆಗೆ ಸೇರ್ಪಡೆಯಾದ ನೌಕರರಿಗೆ ಜಾರಿಗೆ ತಂದಿರುವ ಎನ್‌ಪಿಎಸ್ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಎನ್‌ಪಿಎಸ್ ವ್ಯಾಪ್ತಿಯ ಸರ್ಕಾರಿ ನೌಕರರು ಹಲವು ವರ್ಷಗಳಿಂದ ವಿವಿಧ ರೀತಿಯ ಹೋರಾಟಗಳ ಮೂಲಕ ಸರ್ಕಾರದ ಗಮನ ಸೆಳೆದಿದ್ದರೂ, ಇದುವರೆಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನೌಕರರು ತಮ್ಮ ನಿವೃತ್ತಿ ಜೀವನವನ್ನು ಗೌರವಯುತವಾಗಿ ನಡೆಸಲು ಹಳೆಯ ಪಿಂಚಣಿ ಯೋಜನೆ ಅತ್ಯಗತ್ಯವಾಗಿದೆ. ಹೀಗಾಗಿ ಎನ್‌ಪಿಎಸ್ ಅನ್ನು ರದ್ದುಪಡಿಸಿ, ಆದಷ್ಟು ಶೀಘ್ರದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಮೂಲಕ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದ ಸಮಸ್ತ ಎನ್‌ಪಿಎಸ್ ನೌಕರರ ಪರವಾಗಿ ಈ ಮನವಿಯನ್ನು ಸಲ್ಲಿಸುತ್ತಿದ್ದು, ನಿವೃತ್ತಿಯ ನಂತರ ನೌಕರರಿಗೆ ಆರ್ಥಿಕ ಭದ್ರತೆ ಹಾಗೂ ನೆಮ್ಮದಿಯ ಜೀವನ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತ್ವರಿತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.