ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆ. ದೇವೇಗೌಡರ ಕುಟುಂಬ ರಾಮನಗರ ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿಗೆ ಅಪಾರ ಶ್ರಮ ಹಾಕಿದೆ. ಅಲ್ಲಿನ ನೀರಾವರಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ನಾವು ಪ್ರಾಮಾಣಿಕವಾಗಿ ದುಡಿದಿದ್ದೇವೆ. ಈ ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆಯಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಜನರ ವಿಶ್ವಾಸಗಳಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.