ಹೆಚ್ಚಿನ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರಲು ಬ್ಯಾಂಕುಗಳಿಗೆ ಡಿಸಿ ಸೂಚನೆ

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಭನ್ವರ್ ಸಿಂಗ್ ಮೀನಾ ಅಧ್ಯಕ್ಷತೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ, ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಸ್ಯಾಚುರೇಷನ್ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಭನ್ವರ್ ಸಿಂಗ್ ಮೀನಾ ಅಧ್ಯಕ್ಷತೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ, ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಸ್ಯಾಚುರೇಷನ್ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
Published on
ಚಿಕ್ಕಮಗಳೂರು: ರೈತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ವ್ಯಾಪ್ತಿಗೆ ತರಲು ಬ್ಯಾಂಕುಗಳು ವಿಶೇಷ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ, ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಸ್ಯಾಚುರೇಷನ್ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಬೆಳೆ ವಿಮೆ ನೋಂದಣಿ ಪ್ರಗತಿ ತೃಪ್ತಿಕರವಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಈ ಹಿಂದೆ ಜಿಲ್ಲೆಯ ಕೆಲವು ಮಳೆ ಮಾಪನ ಕೇಂದ್ರಗಳು ಕಾರ್ಯನಿರ್ವಹಿಸದ ಕಾರಣ ರೈತರು ಬೆಳೆ ವಿಮೆಗೆ ನೋಂದಾಯಿಸಲು ಹಿಂಜರಿಯುತ್ತಿದ್ದರು. ಇದೀಗ ಮಳೆ ಮಾಪನ ಕೇಂದ್ರಗಳು ದುರಸ್ತಿಗೊಂಡು ಕಾರ್ಯ ನಿರ್ವಹಿಸುತ್ತಿರುವುದರಿಂದ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರಲು ಬ್ಯಾಂಕುಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಬೆಳೆ ಸಾಲ ನೀಡಿದ್ದರೂ ಬೆಳೆ ವಿಮೆ ನೋಂದಣಿ ಅತ್ಯಂತ ಕಡಿಮೆ ಸಾಧಿಸಿರುವ ಕೆಲವು ಬ್ಯಾಂಕುಗಳ ಕಾರ್ಯವೈಖರಿಯ ಬಗ್ಗೆ ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿ, ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತನನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸುವAತೆ ಮನವೊಲಿಸಲು ಸೂಚಿಸಿದರು. ಬೆಳೆ ವಿಮೆ ನೋಂದಣಿ ಹೆಚ್ಚಿಸಲು ಬ್ಯಾಂಕುಗಳು ವಿಶೇಷ ಅಭಿಯಾನ ರೂಪಿಸಿ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ್ ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಸುಮಾರು ೧.೨೬ ಲಕ್ಷ ಕೆಸಿಸಿ ಹೊಂದಿರದ ಅರ್ಹ ರೈತರು ಇರುವುದಾಗಿ ತಿಳಿಸಿದರು. ಭಾರತ ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಸಿಸಿ ಸ್ಯಾಚುರೇಷನ್ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಶಿಬಿರಗಳ ವೇಳಾಪಟ್ಟಿಯನ್ನು ಎಲ್ಲಾ ಬ್ಯಾಂಕುಗಳು ಹಾಗೂ ಸಂಬAಧಿತ ಇಲಾಖೆಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ರೇಷ್ಮೆ ಸೇರಿದಂತೆ ಎಲ್ಲಾ ಇಲಾಖೆಗಳು ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಅರ್ಹ ರೈತರಿಗೆ ಕೆಸಿಸಿ ಸೌಲಭ್ಯ ದೊರೆಯುವಂತೆ ಸಹಕರಿಸುವಂತೆ ಮನವಿ ಮಾಡಿದರು.
ಎಲ್ಲಾ ಬ್ಯಾಂಕುಗಳು ಮತ್ತು ಸಂಬAಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಕೆಸಿಸಿ ಸ್ಯಾಚುರೇಷನ್ ಶಿಬಿರಗಳನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಜಿಲ್ಲೆಯ ಪ್ರಗತಿಯನ್ನು ಉತ್ತಮಪಡಿಸಲು ಪ್ರತಿಯೊಂದು ಬ್ಯಾಂಕ್ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯ ಕೊನೆಯಲ್ಲಿ, ಮುಂದಿನ ದಿನಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಕೆಸಿಸಿ ಸ್ಯಾಚುರೇಷನ್ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಿ ಜಿಲ್ಲೆಯ ಸಾಧನೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬ್ಯಾಂಕುಗಳ ಪ್ರತಿನಿಧಿಗಳು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸುಜಾತ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ.ಎಂ.ತಿರುಮಲೇಶ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಮಂಗಳ, ವಿವಿಧ ಬ್ಯಾಂಕುಗಳ ಅಧಿಕಾರಿಗಳು, ಜಿಲ್ಲಾ ಸಂಯೋಜಕರು ಹಾಗೂ ನಿಯಂತ್ರಣ ಕಚೇರಿಗಳ ಪ್ರತಿನಿಧಿಗಳು, ಎಸ್‌ಬಿಐ ಜನರಲ್ ಇನ್ಶೂರೆನ್ಸ್ ಹಾಗೂ ಇಫ್ಕೋ ಟೋಕಿಯೋ ಜನರಲ್ ಇನ್ಶೂರೆನ್ಸ್ ಕಂಪನಿಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net