ಗ್ರಾಮಸ್ಥರಿಂದಲೇ ದುರಸ್ತಿಯಾದ ದೇವರಮನೆ ರಸ್ತೆ

ಮೂಡಿಗೆರೆ ತಾಲೂಕಿನ ದೇವರಮನೆ ಸಾಗುವ ರಸ್ತೆ ದುರಸ್ತಿ ಮಾಡುತ್ತಿರುವ ಗ್ರಾಮಸ್ಥರು.
ಮೂಡಿಗೆರೆ ತಾಲೂಕಿನ ದೇವರಮನೆ ಸಾಗುವ ರಸ್ತೆ ದುರಸ್ತಿ ಮಾಡುತ್ತಿರುವ ಗ್ರಾಮಸ್ಥರು.
Published on
ಬಣಕಲ್: ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿ-ಹೊಂಡಗಳಿಂದ ಕೂಡಿರುವ ಕಾರಣ ಸ್ಥಳೀಯ ಗ್ರಾಮಸ್ಥರೇ ಸ್ವಯಂ ಪ್ರೇರಿತರಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ದೇವರಮನೆಗೆ ವಾರಾಂತ್ಯದ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು, ರಸ್ತೆ ಹಾಳಾಗಿರುವುದರಿಂದ ವಾಹನ ಸಂಚಾರ ದುಸ್ತರವಾಗಿದೆ. ರಸ್ತೆ ಸರಿ ಇಲ್ಲದಿರುವುದರಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾಗಿರುವುದರಿಂದ ವಾರಾಂತ್ಯದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಯಾವುದೇ ಸರ್ಕಾರಿ ನೆರವಿಗಾಗಿ ಕಾಯದೇ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಸಿದರು.
ಗ್ರಾಮಸ್ಥ ಗೌತಮ್ ಕೋಗಿಲೆ ಮಾತನಾಡಿ, ದೇವರಮನೆ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿದ್ದರೂ ರಸ್ತೆ ಸಂಪೂರ್ಣ ಹಾಳಾಗಿದೆ. ಪ್ರತಿದಿನ ನೂರಾರು ವಾಹನಗಳು ಮತ್ತು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಶಾಶ್ವತ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಜನರ ಸುರಕ್ಷತೆ ದೃಷ್ಠಿಯಿಂದ ಗ್ರಾಮಸ್ಥರೇ ಸ್ವಯಂ ಪ್ರೇರಿತರಾಗಿ ರಸ್ತೆ ದುರಸ್ತಿ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆ ಶೀಘ್ರದಲ್ಲೇ ಈ ರಸ್ತೆಯನ್ನು ಶಾಶ್ವತವಾಗಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರಾದ ಸಜಿತ್, ತಾರನಾಥ್, ಸತೀಶ್, ರಂಜಿತ್, ವೀರೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net