ಶಿಸ್ತಿನಿಂದ ವಿದ್ಯಾರ್ಥಿಗಳ ಜೀವನ ಉಜ್ವಲ

ಕಡೂರಿನ ಟೈಮ್ಸ್ ಪಿಯು ಕಾಲೇಜಿನ ಆರಂಭೋತ್ಸವ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್  ಉದ್ಘಾಟಿಸಿದರು. ಮಂಜುಳಾ, ಗಂಗಾಧರ್, ನಾಗರಾಜ್ ರಾವ್, ರಾಜೇಶ್, ನಾಗೇಶ್ ಇತರರಿದ್ದರು.
ಕಡೂರಿನ ಟೈಮ್ಸ್ ಪಿಯು ಕಾಲೇಜಿನ ಆರಂಭೋತ್ಸವ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಉದ್ಘಾಟಿಸಿದರು. ಮಂಜುಳಾ, ಗಂಗಾಧರ್, ನಾಗರಾಜ್ ರಾವ್, ರಾಜೇಶ್, ನಾಗೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಟೈಮ್ಸ್ ಪಿಯು ಕಾಲೇಜಿನಲ್ಲಿ
  • ಸಮಾಜದ ಮುನ್ನೆಲೆಗೆ ತರುವ
ಕಡೂರು: ವಿದ್ಯಾರ್ಥಿಗಳು ಶಿಸ್ತು ಬೆಳೆಸಿಕೊಂಡಾಗ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ  ಉಪನಿರ್ದೇಶಕಿ ಮಂಜುಳಾ ತಿಳಿಸಿದರು.
ಯು.ಬಿ.ರಸ್ತೆಯಲ್ಲಿರುವ ಟೈಮ್ಸ್ ಪಿಯು ಕಾಲೇಜಿನಲ್ಲಿ ಬುಧವಾರ ಕಾಲೇಜಿನ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಸುಖವನ್ನು ತ್ಯಾಗ ಮಾಡುತ್ತಾರೆ. ಅವರಿಗೆ ತಕ್ಕ ಪ್ರತಿಫಲದಂತೆ ಉತ್ತಮ ಫಲಿತಾಂಶ ನೀಡುವ ಮೂಲಕ ಕಾಲೇಜು ಮತ್ತು ಪಾಲಕರಿಗೆ ಕೀರ್ತಿ ತರಬೇಕು ಎಂದರು. 
ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಹಿಂದುಳಿದ ವಿದ್ಯಾರ್ಥಿಗಳಲ್ಲಿ ಕಲಿಕೆ ಆಸಕ್ತಿ ಹೆಚ್ಚಿಸಿ ಅಗತ್ಯ ತರಗತಿಗಳನ್ನು ನಡೆಸಿ ಸಮಾಜದ ಮುನ್ನೆಲೆಗೆ ತರುವ ಪ್ರಯತ್ನವಾಗಬೇಕಿದೆ ಎಂದರು.
ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಎಚ್.ಎಂ.ನಾಗರಾಜ ರಾವ್ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜತೆ ನೈತಿಕ ಶಿಕ್ಷಣ ಕಲಿತಾಗ ಮಾತ್ರ ಸಮಾಜದಲ್ಲಿ ಗೌರವಯುತ ಸ್ಥಾನ ದೊರೆಯುತ್ತದೆ. ಗುರುಗಳು ವಿದ್ಯಾರ್ಥಿಗಳಿಗೆ ತಾಳ್ಮೆ, ವಿಶಾಲ ಮನೋಭಾವ, ಕ್ರಿಯಾಶೀಲತೆ, ಕರ್ತವ್ಯ ನಿಷ್ಠೆ ಹಾಗೂ ಗುರಿಗಳನ್ನು ತಿಳಿಸಿಕೊಡಬೇಕು ಎಂದು ಹೇಳಿದರು.
ಕಾಲೇಜು ಸಂಸ್ಥಾಪಕ ಗಂಗಾಧರ್ ಮಾತನಾಡಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜತೆಗೆ ಸಂಸ್ಕಾರ ಶಿಕ್ಷಣವೂ ಅಗತ್ಯ ಎಂದರು. ಸಿವಿಲ್ ಇಂಜಿನಿಯರ್ ಸಂಘದ ಅಧ್ಯಕ್ಷ ಸಿ.ಎಚ್.ಪ್ರೇಮ್‌ಕುಮಾರ್, ಜಿಲ್ಲಾ ಖಜಾನಾಧಿಕಾರಿ ಓಂಕಾರಪ್ಪ, ಟೈಮ್ಸ್ ಕಾಲೇಜು ಪ್ರಾಚಾರ್ಯ  ನಾಗೇಶ್, ವಕೀಲ ರಾಜೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net