ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ರೀತಿ ಅಭಿವೃದ್ಧಿಪಡಿಸುವ ಮೊದಲು ಎಲ್ಲ ಇಲಾಖೆಯವರು ಜಂಟಿ ಪರಿವೀಕ್ಷಣೆ ನಡೆಸಬೇಕು. ಅನಂತರ ಆ ಸ್ಥಳಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿರುವ ಅಪಘಾತ ಸಂಭಾವ್ಯ ಸ್ಥಳಗಳನ್ನು ಗುರುತಿಸಲು ಇರುವ ಮಾನದಂಡಗಳನ್ನು ಆಧರಿಸಿ ಚರ್ಚೆ ನಡೆದ ಬಳಿಕ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ೨೧ ಅಪಘಾತ ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳನ್ನು ಅಭಿವೃದ್ಧಿಪಡಿಸುವ ಕುರಿತು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಒಂದರಿಂದ ಏಳರವರೆಗಿನ ಅಪಘಾತ ಸ್ಥಳಗಳು ರಾಷ್ಟ್ರೀಯ ಹೆದ್ದಾರಿಯ ಬೇಲೂರು ಉಪವಲಯಕ್ಕೆ ಒಳಪಡುತ್ತಿದ್ದು, ಈ ಸ್ಥಳದಲ್ಲಿ ಕಂಟ್ರೋಲ್ ಸಿಗ್ನಲ್‌ಗಳ ಅವಶ್ಯಕತೆ ಇರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಯಕುಮಾರ್ ಅವರು, ಅಂಥ ಸ್ಥಳಗಳಲ್ಲಿ ಬೀದಿ ದೀಪಗಳನ್ನು ಅಳವಡಿಸುವ ಅವಶ್ಯಕತೆ ಇರುವುದಾಗಿ ಹೇಳಿದರು. ಈ ಬಗ್ಗೆ ತುರ್ತು ಕ್ರಮ ಕೈಗೊಂಡು ಬೀದಿ ದೀಪಗಳನ್ನು ಅಳವಡಿಸುವುದಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.
ಇದೇ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಚಿಂತಾಮಣಿ ಕಾಂಬ್ಳೆ ಮಾತನಾಡಿ, ಈಗಾಗಲೇ ಬೇಲೂರು ಉಪವಿಭಾಗದಲ್ಲಿ ರಸ್ತೆ ಅಗಲ ವಿಸ್ತರಣೆ ಹಾಗೂ ಭೌಗೋಳಿಕವಾಗಿ ಇರುವ ಸಮಸ್ಯೆಗಳನ್ನು ಸರಿಪಡಿಸುವುದಾಗಿ ಹೇಳಿದರಲ್ಲದೆ, ಅಗತ್ಯವಿರುವ ಸ್ಥಳಗಳಲ್ಲಿ ವಾಹನಗಳ ವೇಗ ನಿಯಂತ್ರಿಸಲು ಅಳವಡಿಸುವ ಗುರುತುಗಳನ್ನು ನಿರ್ಮಿಸಲಾಗುವುದು, ಅಪಾಯ ಒದಗುವ ಕೆಲವು ಕಡೆ ತಾತ್ಕಾಲಿಕವಾದ ಪರಿಹಾರೋಪಾಯಗಳನ್ನು ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ ಈ ಭಾಗದಲ್ಲಿ ಪೂರ್ಣ ಪ್ರಮಾಣದ ಅಭಿವೃದ್ಧಿ ಕೈಗೊಳ್ಳಲು ವಿಸ್ತೃತ ವರದಿ ತಯಾರಿಕೆ ಹಂತದಲ್ಲಿರುವುದಾಗಿ ತಿಳಿಸಿದರು.
ಹೆದ್ದಾರಿ ಪ್ರಾಧಿಕಾರದ ತುಮಕೂರು ವಿಭಾಗದ ಯೋಜನಾ ನಿರ್ದೇಶಕ ಅನೂಪ್ ಶರ್ಮಾ ಮಾತನಾಡಿ, ತಮ್ಮ ಅಧೀನಕ್ಕೆ ಒಳಪಡುವ ಅಪಘಾತ ಸಂಭಾವ್ಯ ಸ್ಥಳಗಳನ್ನು ಆರು ತಿಂಗಳೊಳಗೆ ಅಭಿವೃದ್ಧಿಪಡಿಸುವುದಾಗಿಯೂ, ಕೋಡಿಹಳ್ಳಿ ಕ್ರಾಸ್‌ನಿಂದ ಬೀರೂರು ಎಂ.ಜಿ.ಸರ್ಕಲ್‌ವರೆಗಿನ ಸ್ಥಳದಲ್ಲಿ ಬೈಪಾಸ್ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದರಿಂದ ಈ ಸ್ಥಳವನ್ನು ಅಭಿವೃದ್ಧಿಪಡಿಸಿರುವುದಾಗಿ ಪರಿಗಣಿಸಬಹುದು ಎಂದು ತಿಳಿಸಿದರು.
ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಆದ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸಿ.ಎಂ.ದಿವಾಕರ್ ಅವರು ಪ್ರಾಸ್ತಾವಿಕ ಮಾತನಾಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜೇಶ್ ಕುಮಾರ್, ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜು, ಹೆದ್ದಾರಿ ಪ್ರಾಧಿಕಾರದ ಹಾಸನ ವಿಭಾಗದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ನಗರಾಭಿವೃದ್ಧಿ ಕೋಶದ ಅಧಿಕಾರಿಗಳು, ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಡೂರು ಹಾಗೂ ತರೀಕೆರೆ ಪುರಸಭೆಯ ಮುಖ್ಯಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.