ಡಿಕೆಶಿ ದುಡಿತಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ

ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಶ್ರೀ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಶ್ರೀ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್‌ ಹೈಕಮಾಂಡ್‌ ಕೈಗೊಂಡಿರುವ ತೀರ್ಮಾನವು, ಸ್ವಲ್ಪ ತಡ
  • ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಶ್ರೀ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಚಿಕ್ಕಮಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಕೈಗೊಂಡಿರುವ ತೀರ್ಮಾನವು, ಸ್ವಲ್ಪ ತಡವಾದರೂ ಡಿ.ಕೆ.ಶಿವಕುಮಾರ್ ಅವರ ದುಡಿತಕ್ಕೆ ಸಿಕ್ಕ ಪ್ರತಿಫಲವಾಗಿದೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಶ್ರೀ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬುಧವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಡಿ.ಕೆ.ಶಿವಕುಮಾರ್ ಅವರು ತಾಳ್ಮೆ ಮತ್ತು ಸಹನೆಯಿಂದ ಶ್ರೀರಂಭಾಪುರಿ ಪೀಠದ ಶ್ರೀ ಗಂಗಾಧರ ಅಜ್ಜಯ್ಯನ ಬಳಿ ಮಾಡಿಕೊಂಡ ಸಂಕಲ್ಪಕ್ಕೆ ಮಂಗಳವಾರ ಫಲಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ತಮ್ಮ ಮುಸ್ಸದ್ಧಿತನದಿಂದ ಉದಾರತನದಿಂದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ನಿರ್ಧಾರವನ್ನು ಮೆಚ್ಚಿಕೊಳ್ಳಬೇಕು ಎಂದಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರು ಸಾಮಾನ್ಯವಾಗಿ ಮುಖ್ಯಮಂತ್ರಿ ಆಗುತ್ತಾರೆ. ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಅನುಭವಿ ರಾಜಕಾರಣಿಯಾದ ಸಿದ್ದರಾಮಯ್ಯ ಅವರಿಗೆ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಮಾಡುವ ತೀರ್ಮಾನ ಕೈಕೊಂಡಿತ್ತು. ಸಿದ್ದರಾಮಯ್ಯ ಮತ್ತು ಡಿ.ಕೆ,ಶಿವಕುಮಾರ್ ಅವರಿಗೆ ಐದು ವರ್ಷದ ಅವಧಿಯಲ್ಲಿ ತಲಾ ಎರಡೂವರೆ ವರ್ಷ ಅಧಿಕಾರಿ ಹಂಚಿಕೆ ಒಪ್ಪಂದ ಕೈಗೊಂಡಿತ್ತು ಎಂದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಉತ್ತಮ ರೀತಿಯಲ್ಲಿ ರಾಜ್ಯದ ಆಡಳಿತ ನಡೆಸಲಿ. ಜಾತಿ-ಜಾತಿ ತಾರತಮ್ಯ, ಕೋಮು ದ್ವೇಷಕ್ಕೆ ಎಡೆ ಮಾಡಿಕೊಡದಂತೆ ಎಲ್ಲ ವರ್ಗವನ್ನು ಮೇಲೆತ್ತುವ ಕೆಲಸ ಮಾಡಲಿ ಎಂದು ಹೇಳಿದರು.
ಅಭಿವೃದ್ಧಿಗೆ ಆದ್ಯತೆ ನೀಡಿ:
ಇತ್ತೀಚಿಗೆ ಭಟ್ಕಳದಲ್ಲಿ ಹೊಟ್ಟಿ ಪಾಡಿಗಾಗಿ ಕಪ್ಪೆ ಚಿಪ್ಪುಆಯುವುದಕ್ಕೆ ಹೋದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ರೀತಿಯ ಜನರಿಗೆ ಕೈತುಂಬಾ ಕೆಲಸ, ಆ ಕೆಲಸಕ್ಕೆ ತಕ್ಕ ಹಣ ಸಿಗುವಂತೆ ಮಾಡಿ. ಆರ್ಥಿಕವಾಗಿ ಜನರಿಗೆ ಬಲ ತುಂಬುವ ಕೆಲಸ ಆಗಬೇಕು. ತಮ್ಮ ಕಾಲಿನ ಮೇಲೆ ತಾವು ನಿಂತು ಬದುಕುವ ಶಕ್ತಿ ತುಂಬ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದರು.
ಬಡ ಜನರನ್ನು ಮೇಲೆತ್ತಬೇಕು ಎಂಬುದರಲ್ಲಿ ಯಾವುದೇ ತಕರಾರು ಇಲ್ಲ. ಕೆಲವು ಪ್ರಯೋಜವಿಲ್ಲದ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಆ ನಂತರದಲ್ಲಿ ಈ ಕೆಲಸ ಮಾಡಲಿ. ಮುಂದಿನಗಳಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವ ಡಿ.ಕೆ.ಶಿವಕುಮಾರ್ ಇಂತಹ ಎಲ್ಲ ಗಟ್ಟಿ ನಿಲುವು ತೆಗೆದುಕೊಳ್ಳುವ ಆತ್ಮಬಲ ಅವರಿಗೆ ದೊರೆಯಲಿ ಎಂದು ಹೇಳಿದರು.
ಹಿಜಾಬ್‌ ವಿರುದ್ಧ ಸಹ ಪರೋಕ್ಷ ಅಸಮಧಾನ:
ಶಾಲಾ ವ್ಯವಸ್ಥೆಯಲ್ಲಿ ಯಾವ ಜಾತಿ, ಜನಾಂಗವಾದರೂ ಸಹ ಶಾಲೆಯ ನಿಯಮ ಪಾಲನೆ ಮಾಡಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಜಾತಿ-ಜಾತಿಗಳಲ್ಲಿ ಸಂಘರ್ಷ ಹೆಚ್ಚಾಗುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳಲ್ಲಿಯೂ ಸಹ ಜಾತಿ ಮನೋಭಾವನೆ ಬೆಳೆಯುವ ವ್ಯವಸ್ಥೆ ನಿರ್ಮಾಣವಾಗುತ್ತಿದೆ. ಇದರಿಂದ ಧರ್ಮಪೀಠಗಳಿಗೆ ನೋವಾಗುತ್ತಿದೆ ಎಂದು ಬೇಸರ ವ್ಯಕ್ತಪಪಡಿಸಿದರು.
ರಾಜಕೀಯ ಸಂಘರ್ಷಕ್ಕೂ ಬೇಸರ:
ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ರಾಜಕೀಯ ನಾಯಕರ ರಾಜಕೀಯ ಸಂಘರ್ಷ ಬಗ್ಗೆಯೂ ಬೇಸರ ವ್ಯಕ್ತಪಡಿರ್ದ ಶ್ರೀಗಳು, ಒಳ್ಳೆಯ ಕೆಲಸಗಳನ್ನು ಮಾಡಿದಾಗ ಸಹಕಾರ ನೀಡಿ , ಹಳಿ ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net