ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ

ಎನ್.ಆರ್.ಪುರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಒಕ್ಕೂಟದ ಅಧ್ಯಕ್ಷೆ ರತ್ನಮ್ಮ ಉದ್ಘಾಟಿಸಿದರು.
ಎನ್.ಆರ್.ಪುರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಒಕ್ಕೂಟದ ಅಧ್ಯಕ್ಷೆ ರತ್ನಮ್ಮ ಉದ್ಘಾಟಿಸಿದರು.
Published on
ಎನ್.ಆರ್.ಪುರ: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ, ಜೀವನ ಶೈಲಿ ವ್ಯತ್ಯಾಸವಾಗಿರುವುದರಿಂದ ಚಿಕ್ಕ ವಯಸ್ಸಿನವರಿಗೂ ಮಧು ಮೇಹ ಕಾಣಿಸುತ್ತಿದೆ ಎಂದು ವೈದ್ಯ ಡಾ.ಎನ್.ಆರ್.ಚಲನ ತಿಳಿಸಿದರು.
ಅಂಬೇಡ್ಕರ್ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎನ್.ಆರ್.ಪುರ ವಲಯ ವ್ಯಾಪ್ತಿಯ ಜ್ಞಾನ ವಿಕಾಸ ಕೇಂದ್ರಗಳ ಆಶ್ರಯದಲ್ಲಿ ಸದಸ್ಯರಿಗೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದೆ, ಕಾಲ,ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೊಪ್ಪ, ಎನ್.ಆರ್.ಪುರ ಯೋಜನಾಧಿಕಾರಿ ರಾಜೇಶ್ ಮಾತನಾಡಿ, ಪ್ರತಿಯೊಬ್ಬರಿಗೂ ಅರೋಗ್ಯ ಮುಖ್ಯ. ಯೋಜನೆಯಲ್ಲಿ ಸ್ವಾಸ್ಥ್ಯ ಸಂಕಲ್ಪ, ಧಾರ್ಮಿಕ ಕಾರ್ಯಕ್ರಮ, ಪರಿಸರ, ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜ್ಞಾನ ವಿಕಾಸ ಕೇಂದ್ರದಲ್ಲಿ ಅಧ್ಯಯನ ಪ್ರವಾಸ, ಆರೋಗ್ಯ ತಪಾಸಣೆ, ಸ್ವ ಉದ್ಯೋಗ ತರಬೇತಿ, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ, ಕೌಟುಂಬಿಕ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಬಸ್ತಿ ಮಠದ ಒಕ್ಕೂಟದ ಅಧ್ಯಕ್ಷರು, ವಿಪತ್ತು ನಿರ್ವಹಣೆಯ ಸ್ವಯಂ ಸೇವಕರು, ಸೇವಾ ಪ್ರತಿನಿಧಿಗಳು ಇದ್ದರು. 103 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷೆ ರತ್ನಮ್ಮ, ಡಾ.ಚಿರಾಗ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಬೃಂದಶ್ರೀ, ಎನ್.ಆರ್.ಪುರ ವಲಯ ಮೇಲ್ವೀಚಾರಕ ರತನ್, ವಿಮಲಾ, ಶಶಿಕಲಾ, ಭಾನುಮತಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net