ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಡಿಎಸ್‌ಎಸ್‌ ಪ್ರತಿಭಟನೆ

ಚಿಕ್ಕಮಗಳೂರು ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್ಎಸ್ ಕಾರ್ಯಕರ್ತರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಚಿಕ್ಕಮಗಳೂರು ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್ಎಸ್ ಕಾರ್ಯಕರ್ತರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
Published on
ಚಿಕ್ಕಮಗಳೂರು: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರ ಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಡಿಎಸ್ಎಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಬಾಲಕೃಷ್ಣ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ದಂತೆ ವಿವಿಧ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವ ಕೇಂದ್ರದ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಶಿಕ್ಷಣ ಪ್ರೇಮಿ ಸೋನಮ್ ವಾಂಗ್ಚುಂಗ್ ಹಾಗೂ ಅವರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿ ಹೋರಾಟ ಹತ್ತಿಕ್ಕುತ್ತಿರುವುದು ಸರಿಯಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಶಿಕ್ಷಣ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ದರು.
ಬಳಿಕ ಜಿಲ್ಲಾಡಳಿತ ಮೂಲಕ ಪ್ರಧಾನ ಮಂತ್ರಿಯವರಿಗೆ ದಸಂಸ ಮುಖಂಡರುಗಳು ಮನವಿ ಸಲ್ಲಿಸಿ ದರು. ಈ ಸಂದರ್ಭದಲ್ಲಿ ದಸಂಸ ಮುಖಂಡರುಗಳಾದ ಯೋಗೀಶ್, ಪ್ರಸನ್ನ, ಕೆ.ಕೆ.ಬಾಬು, ಉಮೇಶ್, ಗಿರೀಶ್, ವಸಂತ್, ಪವಿತ್ರ, ಸಿದ್ದಯ್ಯ, ಸತೀಶ್, ರವಿ, ಚಂದ್ರು ಮುಂತಾದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net