ಶಿಕ್ಷಣ ಜೀವನದ ಅಮೂಲ್ಯ ಸಂಪತ್ತು

ಎನ್.ಆರ್.ಪುರ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾಕ್ಕೆ ಪಪಂ ಅಧ್ಯಕ್ಷೆ ಜುಬೇದಾ ಚಾಲನೆ ನೀಡಿದರು. ನವಾಜ್, ನಿವೇದಿತಾ ಹಾಗೂ ಶಾಲಾ ಮಕ್ಕಳು ಇದ್ದರು.
ಎನ್.ಆರ್.ಪುರ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾಕ್ಕೆ ಪಪಂ ಅಧ್ಯಕ್ಷೆ ಜುಬೇದಾ ಚಾಲನೆ ನೀಡಿದರು. ನವಾಜ್, ನಿವೇದಿತಾ ಹಾಗೂ ಶಾಲಾ ಮಕ್ಕಳು ಇದ್ದರು.
Published on
ಎನ್.ಆರ್.ಪುರ: ಶಿಕ್ಷಣ ನಮ್ಮ ಜೀವನದ ಅಮೂಲ್ಯ ಸಂಪತ್ತಾಗಿದ್ದು ಅದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಪಪಂ ಅಧ್ಯಕ್ಷೆ ಜುಬೇದಾ ತಿಳಿಸಿದರು.
ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯಲ್ಲಿ  ಮಾತನಾಡಿದರು. ಕಲಿಕೆ ನಿರಂತರವಾಗಿದೆ. ಮಕ್ಕಳು ಸರ್ಕಾರ ನೀಡುತ್ತಿರುವ ಉಚಿತ ಶಿಕ್ಷಣ ಪಡೆಯಬೇಕು. ಮೌಲಾನಾ ಅಜಾದ್ ಅವರು ಶಿಕ್ಷಣ ಪ್ರೇಮಿಯಾಗಿದ್ದರು. ಅವರ ಆದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯ ನವಾಜ್ ಮಾತನಾಡಿ, ಸರ್ಕಾರ ಅಲ್ಪಸಂಖ್ಯಾತರ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಉಚಿತ ಶಿಕ್ಷಣ, ಬಿಸಿಊಟ, ಸ್ಕಾಲರ್‌ಷಿಪ್ ಸಹ ನೀಡುತ್ತಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿ ಮಾಲಾನಾ ಅಜಾದ್ ಮಾದರಿ ಶಾಲೆಯ ಮುಖ್ಯಶಿಕ್ಷಕಿ ನಿವೇದಿತಾ ಮಾತನಾಡಿ, ನಮ್ಮ ಶಾಲೆಯಲ್ಲಿ 100ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮೌಲಾನಾ ಅಜಾದ್ ಅವರು 10 
ವಷರ್ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮಕ್ಕಳು ಮೊಬೈಲ್ ಕಡೆ ಗಮನ ಕಡಿಮೆ ಮಾಡಬೇಕು. ಓದಿನತ್ತ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. ಮಕ್ಕಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ನಂತರ ಮಕ್ಕಳ ಜಾಥಾ ನಡೆಸಲಾಯಿತು. ಸಹ ಶಿಕ್ಷಕಿಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net