ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಶ್ರಮ

ಕಡೂರಿನಲ್ಲಿ ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಡಿಎಸ್‌ಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು. ರಾಜ್ಯ ಸಂಚಾಲಕ ಡಿ.ಆರ್.ಪಾಂಡುರಂಗಸ್ವಾಮಿ, ಟಿ.ಮಂಜಪ್ಪ, ಲಕ್ಷ್ಮಣ್, ಹರೀಶ್ ಇತರರಿದ್ದರು.
ಕಡೂರಿನಲ್ಲಿ ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಡಿಎಸ್‌ಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು. ರಾಜ್ಯ ಸಂಚಾಲಕ ಡಿ.ಆರ್.ಪಾಂಡುರಂಗಸ್ವಾಮಿ, ಟಿ.ಮಂಜಪ್ಪ, ಲಕ್ಷ್ಮಣ್, ಹರೀಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಘಟಕಗಳಿಗೆ
  • ತಳಮಟ್ಟದ ಸಮುದಾಯಗಳು
ಕಡೂರು: ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಧ್ವನಿಗೂಡಿಸುವ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಒತ್ತು ಕೊಡಲಾಗುತ್ತಿದೆ ಎಂದು ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಡಿಎಸ್‌ಎಸ್ ರಾಜ್ಯ ಸಂಚಾಲಕ ಡಿ.ಆರ್.ಪಾಂಡುರಂಗಸ್ವಾಮಿ ತಿಳಿಸಿದರು.
ಗುರುವಾರ ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನೆ ಮಾಡುವುದರ ಮೂಲಕ ತಳಮಟ್ಟದ ಸಮುದಾಯಗಳು ಎಲ್ಲ ರಂಗಗಳಲ್ಲಿ ಪ್ರಗತಿ ಹೊಂದಲು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಿದ್ದಾರೆ ಎಂದರು. 
ಅಸ್ಪೃಶ್ಯತೆ, ಅಂಧಕಾರ, ಮೂಢನಂಬಿಕೆ, ಮೇಲು-ಕೀಳೆಂಬ ಭೇದ ಹೋಗಲಾಡಿಸಲು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ  ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ. ಅಂಬೇಡ್ಕರ್ ವಿಚಾರಧಾರೆಗಳು ಸಮಾಜಕ್ಕೆ ಪ್ರಸ್ತುತವಾಗಿವೆ. ಪ್ರತಿಯೊಬ್ಬರೂ ಅವರ ಆಶಯಗಳನ್ನು ಈಡೇರಿಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಂಘಟನೆಗೆ ಒತ್ತುಕೊಡಲು ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
 ರಾಜ್ಯದಲ್ಲಿ ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಡಿಎಸ್‌ಎಸ್ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸಮುದಾಯಗಳಿಗೆ ಹೋರಾಟ, ಪ್ರತಿಭಟನೆ ಮೂಲಕ ನ್ಯಾಯ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಾಖೆಗಳ ಮೂಲಕ ಸಂಘಟನೆಯ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ ಎಂದರು.
 ರಾಜ್ಯ ಸಂಘಟನಾ ಸಂಚಾಲಕ ಟಿ.ಮಂಜಪ್ಪ ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಿನಲ್ಲಿ ಸ್ಥಾಪನೆಯಾದ ನಂತರ ದೀನ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಅನ್ಯಾಯವಾದಾಗ ಹೋರಾಟ, ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಸ್ಪಂದಿಸಲಾಗಿದೆ ಎಂದರು.
ನೂತನ ಜಿಲ್ಲಾ ಸಂಚಾಲಕ ಟಿ.ಲಕ್ಷ್ಮಣ್ ಮಾತನಾಡಿ, ರಾಜ್ಯ ಸಂಚಾಲಕರು ನೀಡಿರುವ ಹುದ್ದೆಯನ್ನು ಎಲ್ಲರ ಸಹಕಾರದಿಂದ ಜವಾಬ್ದಾರಿಯುತವಾಗಿ ನಿರ್ವಹಿಸಲಾಗುವುದು ಎಂದರು.
ಜಿಲ್ಲಾ ಸಂಚಾಲಕ ಟಿ.ಲಕ್ಷ್ಮಣ್, ಚಿಕ್ಕಮಗಳೂರು ತಾಲೂಕು ಸಂಚಾಲಕ ತಿಪ್ಪೇಶ್, ಕಡೂರು ತಾಲೂಕು ಸಂಚಾಲಕ ಬಿ.ಎಚ್.ಹರೀಶ್, ತರೀಕೆರೆ ತಾಲೂಕು ಸಂಚಾಲಕ ಬಸವರಾಜ್ ಅವರನ್ನು ನೇಮಕಗೊಳಿಸಲಾಯಿತು. ರಾಜ್ಯ ಸಂಘಟನಾ ಸಂಚಾಲಕ ಗೋವಿಂದ ಸಣ್ಣಕ್ಕಿ, ರಾಜ್ಯ ಸಮಿತಿ ಸದಸ್ಯ ಶಿವಕುಮಾರ್, ಹೊಳಲ್ಕೆರೆ ತಾಲೂಕು ಸಂಚಾಲಕ ರಂಗಪ್ಪ, ಮಲ್ಲೇಶ್ವರ ರಾಮಣ್ಣ, ಮಾರುತಿ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net