ಸಮಿತಿ ಅಧ್ಯಕ್ಷ ಅಂಬ್ಲೂರು ರಾಮಕೃಷ್ಣ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ ಆನೆ ತುಳಿತಕ್ಕೆ 13 ರೈತರು ಹಾಗೂ ಕೃಷಿ ಕಾರ್ಮಿಕರು ಬಲಿಯಾಗಿದ್ದರೂ ಸರ್ಕಾರ ಶಾಶ್ವತ ಪರಿಹಾರ ನೀಡಲು ಕಾಳಜಿ ವಹಿಸುತ್ತಿಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ಕೆಟ್ಟ ವ್ಯವಸ್ಥೆ. ಆನೆ ತುಳಿತಕ್ಕೆ ಒಳಗಾದ ಕೃಷಿ ಕಾರ್ಮಿಕರ ಪರವಾಗಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ ನಡೆದಿರುವುದು ವಿಪರ್ಯಾಸ. ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಲು ಪ್ರತಿಯೊಬ್ಬ ನಾಗರಿಕರಿಗೂ ಹಕ್ಕಿದೆ ಎಂದರು.