ಕೆಂಪೇಗೌಡರ ಆದರ್ಶ ಅಳವಡಿಸಿಕೊಳ್ಳಿ

ಮೂಡಿಗೆರೆಯಲ್ಲಿ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಉದ್ಘಾಟಿಸಿದರು. ಬ್ರಿಜೇಶ್ ಕಡಿದಾಳ್, ಬಿ.ಎಸ್.ಜಯರಾಂ, ಡಿ.ಕೆ.ಲಕ್ಷ್ಮಣ್ ಗೌಡ, ಬಿ.ಆರ್.ಬಾಲಕೃಷ್ಣ, ಎಚ್.ಜಿ.ಸುರೇಂದ್ರ, ಟಿ.ಎಂ.ಗಜೇಂದ್ರ ಇತರರಿದ್ದರು.
ಮೂಡಿಗೆರೆಯಲ್ಲಿ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಉದ್ಘಾಟಿಸಿದರು. ಬ್ರಿಜೇಶ್ ಕಡಿದಾಳ್, ಬಿ.ಎಸ್.ಜಯರಾಂ, ಡಿ.ಕೆ.ಲಕ್ಷ್ಮಣ್ ಗೌಡ, ಬಿ.ಆರ್.ಬಾಲಕೃಷ್ಣ, ಎಚ್.ಜಿ.ಸುರೇಂದ್ರ, ಟಿ.ಎಂ.ಗಜೇಂದ್ರ ಇತರರಿದ್ದರು.
Published on
ಮೂಡಿಗೆರೆ: ಸಮಾಜದ ಒಳಿತಿಗಾಗಿ ದೂರದೃಷ್ಟಿಯುಳ್ಳ ಆಡಳಿತಗಾರ ನಾಡಪ್ರಭು ಕೆಂಪೇಗೌಡರ ಆದರ್ಶವನ್ನು ಯುವಜನರು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಸುಸಂಸ್ಕೃತ ಜೀವನ ನಡೆಸಲು ಸಾಧ್ಯ ಎಂದು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಬಿಜಿಎಸ್ ಒಕ್ಕಲಿಗರ ಸಂಘದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
16ನೇ ಶತಮಾನದಲ್ಲಿ ಕೆಂಪೇಗೌಡರು ಬೆಂಗಳೂರನ್ನು ಯೋಜಿತ ನಗರವನ್ನಾಗಿ ರೂಪಿಸಿದರು. ಕೆರೆ, ಉದ್ಯಾನ, ದೇವಾಲಯ ಮತ್ತು ರಸ್ತೆಗಳನ್ನು ನಿರ್ಮಿಸಿ ಜನರ ಬದುಕು ಸುಧಾರಿಸುವ ಕಾರ್ಯ ಮಾಡಿದ್ದರಿಂದ ಬೆಂಗಳೂರಿನ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದರು. 
ಕೆಂಪೇಗೌಡ ಒಕ್ಕಲಿಗರ ವೇದಿಕೆ ತಾಲೂಕು ಅಧ್ಯಕ್ಷ ಬ್ರಿಜೇಶ್ ಕಡಿದಾಳ್ ಮಾತನಾಡಿ, ತಾಲೂಕು ಕೆಂಪೇಗೌಡ ಒಕ್ಕಲಿಗರ ವೇದಿಕೆಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. 20 ಕಿ.ಮೀ.ವರೆಗೂ ಇಂಧನ ವೆಚ್ಚವನ್ನು ವೇದಿಕೆಯಿಂದ ಭರಿಸಲಾಗುತ್ತದೆ ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಆಂಬುಲೆನ್ಸ್ ಚಾಲಕರನ್ನು ಸನ್ಮಾನಿಸಲಾಯಿತು. ಕೆಂಪೇಗೌಡ ಒಕ್ಕಲಿಗರ ವೇದಿಕೆಯಿಂದ ಆಂಬುಲೆನ್ಸ್ ಸಂಚಾರಕ್ಕೆ ಎಂ.ಕೆ.ಪ್ರಾಣೇಶ್ ಚಾಲನೆ ನೀಡಿದರು.
ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್.ಜಯರಾಂ, ತಾಲೂಕು ಕಸಾಪ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ ಗೌಡ, ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎಂ.ಗಜೇಂದ್ರ, ಬಿಜಿಎಸ್ ಶಾಲೆ ಟ್ರಸ್ಟಿಗಳಾದ ಎನ್.ಎಲ್.ಪುಣ್ಯಮೂರ್ತಿ, ಕೆ.ಎಚ್.ವೆಂಕಟೇಶ್, ಹಿರಿಯ ಸಾಹಿತಿ ಹಳೇಕೋಟೆ ರಮೇಶ್, ಶಿಕ್ಷಣ ಇಲಾಖೆ ಅಧಿಕಾರಿ ಹೇಮಂತ್ ಚಂದ್ರ, ಬಿಜಿಎಸ್ ಕಾಲೇಜು ಪ್ರಾಚಾರ್ಯ ಸಂದೇಶ್, ಹಿರಿಯ ವೈದ್ಯ ಅನಂತಪದ್ಮನಾಭ, ಕಂದಾಯ ಇಲಾಖೆ ಶಿರಸ್ತೇದಾರ್ ರಘು, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್, ಪ್ರಸಾದ್ ಬಕ್ಕಿ, ಮಂಜುನಾಥ್, ಪುಟ್ಟಸ್ವಾಮಿಗೌಡ, ಅಣ್ಣೇಗೌಡ, ರಾಹುಲ್ ಗೌಡ, ಶ್ರುತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net