ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಿ

ಮೆಣಸೂರಿನ ಮೌಂಟ್‌ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಿಸ್ಟರ್‌ಶುಭ ಚಾಲನೆ ನೀಡಿದರು. ಮಂಜುನಾಥ್, ಪ್ರೀಜಿನಾ, ನಿಶಾ,ಕಾವೇರಿ ಇದ್ದರು.
ಮೆಣಸೂರಿನ ಮೌಂಟ್‌ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಿಸ್ಟರ್‌ಶುಭ ಚಾಲನೆ ನೀಡಿದರು. ಮಂಜುನಾಥ್, ಪ್ರೀಜಿನಾ, ನಿಶಾ,ಕಾವೇರಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗಿಡನೆಡುವ ಕಾರ್ಯಕ್ರಮ
  • ವಿಶ್ವ ಪರಿಸರ ದಿನಾಚರಣೆ
ಎನ್.ಆರ್.ಪುರ: ಪ್ರಕೃತಿಯನ್ನು ನಾವು ಪ್ರೀತಿಸಿದರೆ ಪ್ರಕೃತಿ ನಮ್ಮನ್ನು ಪ್ರೀತಿಸುತ್ತದೆ ಎಂದು ಮೌಂಟ್ ಕಾರ್ಮೆಲ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಸಿಸ್ಟರ್ ಶುಭ ತಿಳಿಸಿದರು.
ಮೆಣಸೂರಿನ ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜಿನ ಆವರಣದಲ್ಲಿ ಗಿಡನೆಡುವ ಕಾರ್ಯಕ್ರಮ, ರಸ ಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜನ್ಮದಿನ ಅಥವಾ ಮನೆಯಲ್ಲಿ ವಿಶೇಷ ಕಾರ್ಯಕ್ರಮಗಳಾದಾಗ ಗಿಡಗಳನ್ನು ನೆಡುವ ಮೂಲಕ ಪ್ರಕೃತಿಯನ್ನು ಬೆಳೆಸಿ ಅದರ ಸಂರಕ್ಷಣೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ತಮ್ಮ ಮನೆಗಳಲ್ಲಿ ಒಂದೊಂದು ಗಿಡಗಳನ್ನು ನೆಡುವ ಮೂಲಕ ಪರಿಸರ ರಕ್ಷಿಸುವ ಕೆಲಸ ಮಾಡಬೇಕು ಎಂದರು.
ಉಪನ್ಯಾಸಕರಾದ ಮಂಜುನಾಥ್, ಆಲಂದೂರು ನಂದಿನಿ, ಪ್ರೀಜಿನಾ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ಕೊಟ್ಟರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ನಿಶಾ ಹಾಗೂ ಕಾವೇರಿ ಪರಿಸರದ ಬಗ್ಗೆ ಭಾಷಣ ಮಾಡಿದರು. ಶಾಲಾ ಆವರಣದಲ್ಲಿ ಹಲಸು, ಮಾವು ಹಾಗೂ ನೇರಳೆ ಗಿಡಗಳನ್ನು ನೆಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net