ಕಡೂರು: ಮಹಿಳೆಯರು ಹಾಗೂ ಮಕ್ಕಳ ಮೇಲಿನ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕಿದ್ದು, ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಜತೆಗೆ ಸಾರ್ವಜನಿಕರಲ್ಲಿ ನಿರಂತರ ಅರಿವು ಮೂಡಿಸುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೇಳಿದರು.
ಕಡೂರಿನ ಕಾನ್ಫಿಟೆಂಡ್ ಪಿಯು ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕುರಿತು ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಎಂಬುದು ಸಮಾಜಕ್ಕೆ ಅಂಟಿದ ಪಿಡುಗು. ಇದರ ನಿವಾರಣೆಗೆ ಜಾಗೃತಿ ಅಗತ್ಯ. ಮಾನವ ಕಳ್ಳ ಸಾಗಾಣಿಕೆ ಮಾಡುವುದು ಅಕ್ಷಮ್ಯ ಅಪರಾಧ. ಜನಸಾಮಾನ್ಯರು ಮಾನವ ಕಳ್ಳ ಸಾಗಾಣಿಕೆ ಕುರಿತು ಇರುವ ಕಾನೂನುಗಳ ಬಗ್ಗೆ ಅರಿವು ಹೊಂದಬೇಕು ಎಂದರು.
ಕಡೂರು ಸಿಪಿಐ ರಫೀಕ್ ಮಾನವ ಕಳ್ಳಸಾಗಣಿಕೆ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಬಿ.ಆರ್.ಹರೀಶ್, ಕಾರ್ಯದರ್ಶಿ ಎ.ಎಸ್.ಸ್ವಾಮಿ, ಕಾಲೇಜಿನ ಉಪನ್ಯಾಸಕ ಆಶೋಕ್, ರಾಜೇಶ್, ಶ್ರೀನಿವಾಸ್, ಪೂಜಾ ಮತ್ತಿತರಿದ್ದರು.