ಒತ್ತಡವಿಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ

ಬಾಳೆಹೊನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ವಿತರಿಸಲಾಯಿತು. ಎಂ.ಜೆ.ಮಹೇಶ್, ಓ.ಡಿ.ಸ್ಟೀನ್, ಮಾಲತಿ, ವೆಂಕಟೇಶ್, ಪ್ರೇಮಾ, ಮಂಜುಳಾ  ಇದ್ದರು.
ಬಾಳೆಹೊನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ವಿತರಿಸಲಾಯಿತು. ಎಂ.ಜೆ.ಮಹೇಶ್, ಓ.ಡಿ.ಸ್ಟೀನ್, ಮಾಲತಿ, ವೆಂಕಟೇಶ್, ಪ್ರೇಮಾ, ಮಂಜುಳಾ ಇದ್ದರು.
Published on
ಬಾಳೆಹೊನ್ನೂರು: ಪರೀಕ್ಷೆ ಎಂಬ ಹಬ್ಬವನ್ನು ಯಾವುದೆ ಒತ್ತಡವಿಲ್ಲದೆ ನಿರ್ವಹಿಸಿ ಯಶಸ್ವಿಯಾಗಬೇಕು ಎಂದು ಎಸ್‌ಡಿಎಂಸಿ ಸದಸ್ಯ ಒ.ಡಿ.ಸ್ಟೀನ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಗುರಿ ಇದ್ದರೆ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ. ವಿದ್ಯಾರ್ಥಿಗಳು ಹಿರಿಯರು, ಪಾಲಕರು ಹಾಗೂ ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸಬೇಕು. ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಪಾಲಕರ ಶ್ರಮ ಅಪಾರ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ, ಆತಂಕಗಳಿಗೆ ಒಳಗಾಗದೆ ಸಮಾಧಾನದಿಂದ ಪರೀಕ್ಷೆ ಬರೆದು ಹೆಚ್ಚು ಅಂಕಗಳಿಸಿ ಓದಿದ ಶಾಲೆಗೆ, ಪಾಲಕರಿಗೆ ಕೀರ್ತಿ  ತರಬೇಕು. 
ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ವಿಧಾನಗಳನ್ನು ತಿಳಿಸಿದ್ದು ಆ ಮಾದರಿಯಲ್ಲಿ ಪರೀಕ್ಷೆ ಯಶಸ್ವಿಗೊಳಿಸಬೇಕು. ಶೇ.90 ಅಂಕ ಗಳಿಸಿದವರಿಗೆ ವಿಶೇಷ ಬಹುಮಾನ, ಶೇ.95 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ನಗದು ಬಹುಮಾನವನ್ನು ಎಸ್‌ಡಿಎಂಸಿಯಿಂದ ನೀಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ವಿವಿಧ ಕ್ರೀಡಾಸ್ಪರ್ಧೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು, ಬಿಸಿಯೂಟ ಅಡುಗೆ ಸಿಬ್ಬಂದಿ, ವರ್ಗಾವಣೆಗೊಂಡ ಶಿಕ್ಷಕ ಎ.ಎಸ್.ಹಾಲಪ್ಪ ಅವರನ್ನು ಗೌರವಿಸಲಾಯಿತು. ಎಸ್‌ಡಿಎಂಸಿ ಸದಸ್ಯರಾದ ಮಾಲತಿ, ವೆಂಕಟೇಶ್, ಪ್ರೇಮಾ, ಮಂಜುಳಾ, ಶಿಕ್ಷಕರಾದ ರಮೇಶ್, ಸ್ಮಿತಾ, ತಮನ್ನಾ, ರವೀಶ್, ಅರ್ಚಿತಾ, ನವ್ಯಶ್ರೀ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net